Tuesday, August 11, 2026
Homeಬ್ರೇಕಿಂಗ್ ನ್ಯೂಸ್BREAKING: ಕ್ಯಾನ್ಸರ್'ನಿಂದ ಬಳಲುತ್ತಿದ್ದ ಖ್ಯಾತ ಖಳನಟ ಹರೀಶ್ ರಾಯ್ ಇನ್ನಿಲ್ಲ

BREAKING: ಕ್ಯಾನ್ಸರ್’ನಿಂದ ಬಳಲುತ್ತಿದ್ದ ಖ್ಯಾತ ಖಳನಟ ಹರೀಶ್ ರಾಯ್ ಇನ್ನಿಲ್ಲ

Telegram Group
Join Now

ಕಳೆದ ಕೆಲ ವರ್ಷಗಳಿಂದಲೂ ಥೈರಾಯ್ಡ್ ಕ್ಯಾನ್ಸರ್​​ನಿಂದ ಬಳಲುತ್ತಿದ್ದು ಸತತ ಹೋರಾಟ ಮಾಡುತ್ತಲೇ ಇದ್ದ ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್(55) ನಿಧನ ಹೊಂದಿದ್ದಾರೆ.

‘ಓಂ’, ‘ನಲ್ಲ’ ಸೇರಿದಂತೆ ‘ಕೆಜಿಎಫ್’, ‘ಕೆಜಿಎಫ್ 2’ ಹಾಗೂ ಕನ್ನಡದ ಹಲವಾರು ಸಿನಿಮಾಗಳಲ್ಲಿ ಖಳನಟನಾಗಿ ನಟಿಸಿದ್ದರು. ನಟ ಯಶ್ ಸೇರಿದಂತೆ ಇನ್ನೂ ಹಲವರು ಹರೀಶ್ ರಾಯ್ ಅವರಿಗೆ ಆರ್ಥಿಕ ಸಹಾಯ ಮಾಡಿದ್ದರು. ಆದರೆ ಅಂತಿಮವಾಗಿ ಹರೀಶ್ ಅವರು ಇಂದು ನಿಧನ ಹೊಂದಿದ್ದಾರೆ.

ಹರೀಶ್ ರಾಯ್ ಅವರು ಥೈರಾಯ್ಡ್ ಕ್ಯಾನ್ಸರ್​​ನಿಂದ ಬಳಲುತ್ತಿದ್ದರು. ಹೊಟ್ಟೆ ಉಬ್ಬರಗೊಂಡು, ದೇಹವೆಲ್ಲ ಕೃಷಗೊಂಡು ಗುರುತೇ ಸಿಗದಂತೆ ಆಗಿದ್ದರು ಹರೀಶ್ ರಾಯ್. ತಮ್ಮ ಚಿಕಿತ್ಸೆಗಾಗಿ ಸಹಾಯವನ್ನು ಸಹ ಅಂಗಲಾಚಿದ್ದರು. ಅದರಂತೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್, ದರ್ಶನ್ ಅಭಿಮಾನಿ ಬಳಗದವರು ಸೇರಿದಂತೆ ಇನ್ನು ಹಲವಾರು ಮಂದಿ ನಟ, ನಟಿಯರು ಹರೀಶ್ ರಾಯ್ ಅವರಿಗೆ ಆರ್ಥಿಕ ಸಹಾಯ ಮಾಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments