Wednesday, February 11, 2026
Homebig breakingBREAKING: ವಿಧಾನಸಭಾ ಜಂಟಿ ಅಧಿವೇಶನದಲ್ಲಿ ಭಾರೀ ಹೈಡ್ರಾಮಾ: ಭಾಷಣ ಓದದೇ ತೆರಳಿದ ರಾಜ್ಯಪಾಲರು

BREAKING: ವಿಧಾನಸಭಾ ಜಂಟಿ ಅಧಿವೇಶನದಲ್ಲಿ ಭಾರೀ ಹೈಡ್ರಾಮಾ: ಭಾಷಣ ಓದದೇ ತೆರಳಿದ ರಾಜ್ಯಪಾಲರು

ಬೆಂಗಳೂರು: ವಿಧಾನಸಭಾ ಜಂಟಿ ಅಧಿವೇಶನದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ರಾಜ್ಯಪಾಲರು ಅಧಿವೇಶನ ಆರಂಭಿಸಿ ಆರಂಭಿಕ ಸಾಲನ್ನು ಹೇಳಿ ಸದನದಿಂದ ಹೊರ ನಡೆದಿದ್ದಾರೆ.

ರಾಜ್ಯಪಾಲರು ಹೊರನಡೆಯುತ್ತಿದ್ದಂತೆ ಆಡಳಿತ ಪಕ್ಷದ ಶಾಸಕರು ಭಾರೀ ವಿರೋಧ ವ್ಯಕ್ತಪಡಿಸಿ ಧಿಕ್ಕಾರ ಕೂಗಲು ಆರಂಭಿಸಿದರು. ಆಡಳಿತ ಸದಸ್ಯರ ವಿರೋಧದ ನಡುವೆಯೂ ರಾಜ್ಯಪಾಲರು ವಿಧಾನಸೌಧದಿಂದ ಹೊರನಡೆದರು.

ಇದೇ ಮೊದಲ ಬಾರಿಗೆ ರಾಜ್ಯದ ಅಧಿವೇಶನ ಇತಿಹಾಸದಲ್ಲಿ ರಾಜ್ಯಪಾಲರು ಭಾಷಣ ಓದದೇ ತೆರಳಿದ್ದಾರೆ. ರಾಜ್ಯಪಾಲರ ನಡೆಗೆ ಕಾಂಗ್ರೆಸ್‌ ಶಾಸಕರು ವಿರೋಧ ವ್ಯಕ್ತಪಡಿಸಿ ಧಿಕ್ಕಾರ ಕೂಗಿದರು. ಈ ವೇಳೆ ರಾಜ್ಯಪಾಲರನ್ನು ಬಿ.ಕೆ.ಹರಿಪ್ರಸಾದ್‌ ಅಡ್ಡಹಾಕಿದರು. ಅವರನ್ನು ಮಾರ್ಷಲ್‌ಗಳು ಪಕ್ಕಕ್ಕೆ ಎಳೆದರು.

ಕೊನೆಯದಾಗಿ, ವಿಧಾನಸಭಾ ಸ್ಪೀಕರ್‌ ಯು.ಟಿ.ಖಾದರ್‌, ಪರಿಷತ್‌ ಸಭಾಧ್ಯಕ್ಷ ಬಸವರಾಜ ಹೊರಟ್ಟಿ, ಸಿಎಂ ಸಿದ್ದರಾಮಯ್ಯ, ಕಾನೂನು ಮಂತ್ರಿಗಳು ರಾಜ್ಯಪಾಲರನ್ನು ಬೀಳ್ಕೊಟ್ಟರು. 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!