Friday, June 26, 2026
Homebig breakingBreaking News : ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು - ಮಣಿಪಾಲ ಆಸ್ಪತ್ರೆಗೆ ದಾಖಲು..!

Breaking News : ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು – ಮಣಿಪಾಲ ಆಸ್ಪತ್ರೆಗೆ ದಾಖಲು..!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಲು ನೋವು ಕಾಣಿಸಿಕೊಂಡ ಕಾರಣ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ವಯೋಸಹಜವಾಗಿ ಮಂಡಿ ನೋವು ಕಾಣಿಸಿಕೊಂಡಿದ್ದು, ಚಿಕಿತ್ಸೆ ಪಡೆಯುವುದಕ್ಕಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಅವರ ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದಾಗಿವೆ. ಅವರು ಇಂದು ಗೌರಿಬಿದನೂರು ಮತ್ತು ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಆಯೋಜನೆಯಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ದಿಢೀರನೆ ಕಾಣಿಸಿಕೊಂಡ ಕಾಲು ನೋವಿನಿಂದಾಗಿ ಎಲ್ಲವನ್ನೂ ರದ್ದುಗೊಳಿಸಿ ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯಲು ಮುಂದಾಗಿದ್ದಾರೆ.

ಈ ಬಗ್ಗೆ ಸಿಎಂ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದರು.

ತಪಾಸಣೆ ನಡೆಸಿದ ವೈದ್ಯರು ಈ ಹಿಂದೆ ಲೆಗಮೆಂಟ್ ಶಸ್ತ್ರ ಚಿಕಿತ್ಸೆ ನಡೆದ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ.

ಎರಡು ದಿನ ಪ್ರಯಾಣ ಮಾಡದೆ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments