Wednesday, July 15, 2026
Homeಬ್ರೇಕಿಂಗ್ ನ್ಯೂಸ್BREAKING NEWS: ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ!

BREAKING NEWS: ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ!

Telegram Group
Join Now

ಖ್ಯಾತ ಗಾಯಕಿ ಆಶಾ ಭೋಸ್ಲೆ (92) ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಆಶಾ ಭೋಸ್ಲೆ ಅವರಿಗೆ ಶನಿವಾರ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಭೋಸ್ಲೆ ಭಾರತೀಯ ಸಂಗೀತ ಇತಿಹಾಸದಲ್ಲಿ ಅತ್ಯಂತ ಪ್ರಸಿದ್ಧ ಹಿನ್ನೆಲೆ ಗಾಯಕಿಯರಲ್ಲಿ ಒಬ್ಬರು. ಎಂಟು ದಶಕಗಳಿಗೂ ಹೆಚ್ಚಿನ ಅವಧಿಯ ವೃತ್ತಿಜೀವನದಲ್ಲಿ ಅವರು ಹಲವಾರು ಭಾರತೀಯ ಭಾಷೆಗಳ ಹಾಡುಗಳಿಗೆ ಧ್ವನಿ ನೀಡುವ ಮೂಲಕ ಮನೆಮಾತಾಗಿದ್ದಾರೆ.

ಹಲವು ವರ್ಷಗಳಿಂದ ಅವರು ಚಲನಚಿತ್ರಗಳಿಗೆ ಹಾಡುಗಳನ್ನು ರೆಕಾರ್ಡ್ ಮಾಡಿದ್ದಾರೆ, ಖಾಸಗಿ ಆಲ್ಬಮ್‌ಗಳನ್ನು ನೀಡಿದ್ದಾರೆ ಮತ್ತು ಭಾರತ ಮತ್ತು ವಿದೇಶಗಳಲ್ಲಿ ಲೈವ್ ಪ್ರದರ್ಶನಗಳನ್ನು ನೀಡಿದ್ದಾರೆ. ಸಂಗೀತಕ್ಕೆ ಅವರು ನೀಡಿರುವ ಕೊಡುಗೆಗಾಗಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸೇರಿದಂತೆ ಹಲವಾರು ಗೌರವಗಳು ಮತ್ತು ಪ್ರಶಸ್ತಿಗಳು ಲಭಿಸಿವೆ. ಅಲ್ಲದೆ, 2008ರಲ್ಲಿ ಭಾರತದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮವಿಭೂಷಣವನ್ನು ನೀಡಿ ಗೌರವಿಸಲಾಗಿದೆ.

ಆಶಾ ಭೋಸ್ಲೆ ಅವರ ಸಂಗೀತ ಪ್ರಯಾಣವು 1943ರಲ್ಲಿ ಪ್ರಾರಂಭವಾಯಿತು. ಕೆಲವೇ ವರ್ಷಗಳಲ್ಲಿ ಅವರು ಹಿಂದಿ ಮತ್ತು ಮರಾಠಿ ಚಿತ್ರರಂಗದ ಅತ್ಯಂತ ಯಶಸ್ವಿ ಗಾಯಕರಲ್ಲಿ ಒಬ್ಬರಾದರು. 2011ರಲ್ಲಿ, ಸಂಗೀತ ಇತಿಹಾಸದಲ್ಲಿ ಹೆಚ್ಚು ಧ್ವನಿಮುದ್ರಣಗೊಂಡ ಕಲಾವಿದೆ ಎಂಬ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಬರೆದರು. ಅವರು ದಿವಂಗತ ನೌಶಾದ್, ದಿವಂಗತ ಎಸ್‌.ಡಿ.ಬರ್ಮನ್, ದಿವಂಗತ ಆರ್‌.ಡಿ. ಬರ್ಮನ್, ಶಂಕರ್-ಜೈಕಿಶನ್, ಕಲ್ಯಾಣ್‌ಜಿ-ಆನಂದ್‌ಜಿ, ಎ.ಆರ್.ರೆಹಮಾನ್ ಸೇರಿದಂತೆ ಹಲವಾರು ಸಂಗೀತಗಾರರು ಮತ್ತು ಗೀತರಚನೆಕಾರರೊಂದಿಗೆ ಕೆಲಸ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments