ಮೈಸೂರು: ಎನ್ ಡಿಎ ಭಾಗವಾಗಿ ಜೆಡಿಎಸ್ ಇದೆ. ಹಾಸನದಲ್ಲೂ ಎನ್ ಡಿಎ ಅಭ್ಯರ್ಥಿ ಗೆಲ್ತಾರೆ. ಯಾವುದೇ ಕಾರಣಕ್ಕೂ ಬಿಜೆಪಿಗೆ ಮತ ನೀಡುವ ಮತದಾರರು ಕಾಂಗ್ರೆಸ್ ಗೆ ಮತ ನೀಡಲ್ಲ. ಮುಂದಿನ ದಿನಗಳಲ್ಲಿ ಪ್ರೀತಂ ಗೌಡ –ಪ್ರಜ್ವಲ್ ರೇವಣ್ಣ ಇಬ್ಬರನ್ನೂ ಕೂರಿಸಿ ಮಾತನಾಡಿಸುವ ಕೆಲಸ ಮಾಡುತ್ತೇವೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದ್ರು.
ಮೈಸೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರೀತಂಗೌಡ- ಪ್ರಜ್ವಲ್ ರೇವಣ್ಣ ನಡುವೆ ಮುನಿಸು ವಿಚಾರವಾಗಿ ಪ್ರತಿಕ್ರಿಯಿಸಿದ್ರು. ಈ ವೇಳೆ ಪ್ರೀತಂ ಗೌಡ ಹೇಳಿಕೆಯನ್ನು ನಾನು ನೋಡಿದ್ದೇನೆ. ಮೋದಿ ಪ್ರಧಾನಿ ಮಾಡಲಿಕ್ಕೆ ನಾನು ದುಡಿಯುತ್ತೇನೆ. 28 ಕ್ಷೇತ್ರಗಳಲ್ಲಿ ಎನ್ ಡಿಎ ಅಭ್ಯರ್ಥಿ ಗೆಲ್ಲಿಸುವಂತಹ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ. 28 ಕ್ಷೇತ್ರಗಳಲ್ಲಿ ಹಾಸನ ಕೂಡ ಒಂದು. ಹಾಸನದಲ್ಲೂ ಎನ್ ಡಿಎ ಅಭ್ಯರ್ಥಿ ಗೆಲ್ತಾರೆ. ನೀವು ಫಲಿತಾಂಶ ಬಂದಾಗ ನೋಡಿ. ಹಾಸನದಲ್ಲಿ ಮೈತ್ರಿ ಅಭ್ಯರ್ಥಿ ಗೆಲುವಿನಲ್ಲಿ ಬಿಜೆಪಿ ಮತಗಳು ಸಹಕಾರಿಯಾಗಿದೆ ಎಂದು ಗೊತ್ತಾಗುತ್ತೆ ಎಂದು ಹೇಳಿದ್ರು.
ಇನ್ನು ರಾಜ್ಯಕ್ಕೆ ಅತಿ ಹೆಚ್ಚು ಅನುದಾನ, ತೆರಿಗೆ ಪಾಲು ಕೊಟ್ಟಿರುವುದು ಮೋದಿ ಸರಕಾರ. ಇದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಮುಂದಿಟ್ಟಿದ್ದೇವೆ. ಬೇಕಾದರೆ ಕಾಂಗ್ರೆಸ್ ಚರ್ಚೆ ನಡೆಸಲಿ. ನಾವು ಸಿದ್ಧ ಎಂದು ಮಾಜಿ ಸಚಿವ ಸಿ.ಟಿ.ರವಿ ಸವಾಲೆಸೆದಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಕೊಟ್ಟ ಕೊಡುಗೆ ಬಗ್ಗೆ ಹೇಳಲಿ. ಅನ್ಯಾಯ ಮಾಡಿದ್ದಾರೆ ಅನ್ನೋದು ನಿಮ್ಮ ದೃಷ್ಟಿಯಾದರೆ ದೃಷ್ಟಿದೋಷ ನಿವಾರಣೆ ಮಾಡಬೇಕು ಎಂದರು. ಹಾಗೇ ಕಾಂಗ್ರೆಸ್ ಗೆ ವಿಭಜನೆ ರೋಗ ಆವರಿಸಿದೆ. ದೇಶ ವಿಭಜಿಸುವ ರೋಗ ಕಾಂಗ್ರೆಸ್ ಗೆ ಬಹು ಹಿಂದಿನಿಂದಲೂ ಇದೆ ಈಗಲೂ ಇದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ರು.