Tuesday, March 31, 2026
Homebig breakingಲಕ್ಷ್ಮೀ ಹೆಬ್ಬಾಳ್ಕರ್‌ಗೆ ನಿಂದಿಸಿದ್ದಕ್ಕೆ ಬಲವಾದ ಸಾಕ್ಷ್ಯ ಸಂಗ್ರಹಿಸಿದ ಸಿಐಡಿ - ಸಿ.ಟಿ. ರವಿಗೆ ಮುಳುವಾಗುತ್ತಾ ಆ...

ಲಕ್ಷ್ಮೀ ಹೆಬ್ಬಾಳ್ಕರ್‌ಗೆ ನಿಂದಿಸಿದ್ದಕ್ಕೆ ಬಲವಾದ ಸಾಕ್ಷ್ಯ ಸಂಗ್ರಹಿಸಿದ ಸಿಐಡಿ – ಸಿ.ಟಿ. ರವಿಗೆ ಮುಳುವಾಗುತ್ತಾ ಆ ಆಡಿಯೋ..?

ಬೆಂಗಳೂರು : ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನ ಸಂದರ್ಭ ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ರನ್ನು ನಿಂದಿಸಿದ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಹು ಮುಖ್ಯ ಆಡಿಯೋ ದಾಖಲೆಯೊಂದನ್ನು ಸಿಐಡಿ ಕಲೆಹಾಕಿದ್ದು, ಇದರಲ್ಲಿ ರವಿ ಅವರು ಅವಾಚ್ಯ ಶಬ್ದ ಬಳಸಿ ನಿಂದಿಸಿರುವುದು ಸ್ಪಷ್ಟವಾಗಿದೆ.
ಅಂದಿನ ಘಟನೆ ಕುರಿತಾಗಿ ಖಾಸಗಿ ವಾಹಿನಿಗಳಲ್ಲಿನ ವಿಡಿಯೋಗಳನ್ನು ಸಾಕ್ಷ್ಯವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಸಭಾಪತಿ ಹೇಳುತ್ತಿದ್ದರು. ಆದರೆ ಸದನದಲ್ಲಿನ ಸರ್ಕಾರಿ ಟೀವಿಯಲ್ಲಿನ ವಿಡಿಯೋವೇ ಇದೀಗ ಸಿಕ್ಕಿದೆ. ಈ ವಿಡಿಯೋ ಸಿ.ಟಿ.ರವಿ ಅವರಿಗೆ ಕಂಟಕವಾಗಬಹುದಾದ ಸಾಧ್ಯತೆಯಿದೆ. ತಾನು ಸಚಿವೆಯನ್ನು ಉದ್ದೇಶಿಸಿ ‘ಫ್ರಸ್ಟ್ರೇಟ್’ ಎಂದು ಹೇಳಿದ್ದೇನೆಯೇ ಹೊರತು ನಿಂದಿಸಿಲ್ಲ ಎಂದು ರವಿ ಹೇಳುತ್ತಿದ್ದರು. ತಾನು ನಿಂದಿಸಿದ್ದೇನೆ ಅನ್ನೋದಕ್ಕೆ ಅಸಲಿ ವಿಡಿಯೋವೇ ಇಲ್ಲ ಎಂದು ಹೇಳಿದ್ದರು. ರವಿ ಅವರು ನಿಂದಿಸಿದ ಕುರಿತು ಯಾವುದೇ ಆಡಿಯೋ ವಿಡಿಯೋ ಇಲ್ಲವೆಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕೂಡ ತಿಳಿಸಿದ್ದರು. ಈಗ ಅಸಲಿ ವಿಡಿಯೋ ಸಿಐಡಿಗೆ ಲಭ್ಯವಾಗಿರುವುದು ಭಾರೀ ಕುತೂಹಲ ಕೆರಳಿಸಿದೆ.
ಅಧಿವೇಶನದ ಘಟನಾವಳಿ ಕುರಿತು ವಿಡಿಯೋ-ಆಡಿಯೋ ದಾಖಲೆ ನೀಡುವಂತೆ ರಾಜ್ಯ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆಗೆ (ಡಿಎಪಿಆರ್) ಸಿಐಡಿ ಮನವಿ ಮಾಡಿತ್ತು. ಕೃತ್ಯ ನಡೆದ ವೇಳೆ ಚಿತ್ರೀಕರಿಸಿದ್ದ 4 ಗಂಟೆ ವಿಡಿಯೋವನ್ನು ಸಿಐಡಿಗೆ ಸಲ್ಲಿಸಲಾಗಿತ್ತು. ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಅದನ್ನು ರವಾನಿಸಿ ಆ ಧ್ವನಿ ಸಿ.ಟಿ. ರವಿ ಅವರದ್ದೇ, ಅಲ್ಲವೇ ಎಂದು ಖಚಿಪಡಿಸಿಕೊಳ್ಳಬೇಕಿದೆ. ಅದಕ್ಕಾಗಿ ರವಿ ಅವರ ಧ್ವನಿ ಸ್ಯಾಂಪಲ್‌ ಪರೀಕ್ಷೆ ನಡೆಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!