Friday, March 27, 2026
Homebig breakingಹಸುವಿನ ಕೆಚ್ಚಲು ಕತ್ತರಿಸಿದ ಪ್ರಕರಣ - ಹಿಂದು ಸಂಘಟನೆಗಳ ಪ್ರತಿಭಟನೆ ರಾಜಕೀಯ ಪ್ರೇರಿತ - ಸಿದ್ದರಾಮಯ್ಯ...

ಹಸುವಿನ ಕೆಚ್ಚಲು ಕತ್ತರಿಸಿದ ಪ್ರಕರಣ – ಹಿಂದು ಸಂಘಟನೆಗಳ ಪ್ರತಿಭಟನೆ ರಾಜಕೀಯ ಪ್ರೇರಿತ – ಸಿದ್ದರಾಮಯ್ಯ ಆಕ್ರೋಶ

ವಿಜಯನಗರ : ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಾಣಿ ಹಿಂಸೆ ಮಾಡುವುದು ಅಪರಾಧ, ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಲಾಗುವುದು ಎಂದಿದ್ದಾರೆ.
ತಪ್ಪಿತಸ್ಥರ ಮಾಹಿತಿ ದೊರೆತಿಲ್ಲ. ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ. ಹಿಂದೂ ಸಂಘಟನೆಗಳ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಾತಿಗಣತಿ ವರದಿಗೆ ವಿರೋಧ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜಾತಿ ಗಣತಿ ವರದಿಗಳ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುವುದು ಸಹಜ. 160 ಕೋಟಿ ರೂ. ವೆಚ್ಚದಲ್ಲಿ ಸಿದ್ದಪಡಿಸಲಾದ ವರದಿಯನ್ನು ಸ್ವೀಕರಿಸಲಾಗಿದ್ದು, ವರದಿಯ ಜಾರಿಯ ಬಗ್ಗೆ ತೀರ್ಮಾನ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!