Monday, October 19, 2026
Homeಬ್ರೇಕಿಂಗ್ ನ್ಯೂಸ್CPI(M) ಪ್ರಧಾನ ಕಾರ್ಯದರ್ಶಿ ಸೀತಾರಾಮ್‌ ಯೆಚೂರಿ ಇನ್ನಿಲ್ಲ..!

CPI(M) ಪ್ರಧಾನ ಕಾರ್ಯದರ್ಶಿ ಸೀತಾರಾಮ್‌ ಯೆಚೂರಿ ಇನ್ನಿಲ್ಲ..!

Telegram Group
Join Now

ನವದೆಹಲಿ : ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ(72) ನಿಧನರಾಗಿದ್ದಾರೆ.
ತೀವ್ರ ಶ್ವಾಸಕೋಶದ ಸೋಂಕಿನಿಂದಾಗಿ ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೀತಾರಾಮ್ ಯೆಚೂರಿ ಗುರುವಾರ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಕಾರಣಕ್ಕೆ ಕೃತಕ ಉಸಿರಾಟದ ಬೆಂಬಲದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (SFI) ಸದಸ್ಯರಾದ ಒಂದು ವರ್ಷದ ನಂತರ 1975 ರಲ್ಲಿ ಸೀತಾರಾಮ್ ಯೆಚೂರಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಸೇರಿದರು. ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ (ಜೆಎನ್‌ಯು) ವಿದ್ಯಾರ್ಥಿಯಾಗಿದ್ದಾಗ ತುರ್ತು ಪರಿಸ್ಥಿತಿಯ ಸಮಯದಲ್ಲಿ ಅವರನ್ನು ಬಂಧಿಸಲಾಗಿತ್ತು. 1977 ಮತ್ತು 1988 ರ ನಡುವೆ ಮೂರು ಬಾರಿ ಜೆಎನ್‌ಯು ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!