Tuesday, March 17, 2026
Homebig breakingದಕ್ಷಿಣ ಕನ್ನಡ: ಹಾಸನದಿಂದ ಕೇರಳದತ್ತ ಜಾನುವಾರುಗಳ ಕಳ್ಳಸಾಗಣೆ: ಪೊಲೀಸರಿಂದ 10 ಗೋವುಗಳ ರಕ್ಷಣೆ!

ದಕ್ಷಿಣ ಕನ್ನಡ: ಹಾಸನದಿಂದ ಕೇರಳದತ್ತ ಜಾನುವಾರುಗಳ ಕಳ್ಳಸಾಗಣೆ: ಪೊಲೀಸರಿಂದ 10 ಗೋವುಗಳ ರಕ್ಷಣೆ!

ದಕ್ಷಿಣ ಕನ್ನಡ: ಹಾಸನದಿಂದ ಕೇರಳದತ್ತ ಜಾನುವಾರುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ತಡೆಹಿಡಿಯಲು ಯತ್ನ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲದ ಬೆಳ್ಳಿಚಡವು ಬಳಿ ನಡೆದಿದೆ.

ಹೌದು .. ಹಾಸನದಿಂದ ಕೇರಳದತ್ತ ಜಾನುವಾರುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಲಾರಿಯನ್ನು ಪುತ್ತೂರು ಗ್ರಾಮೀಣ ಠಾಣಾ ವ್ಯಾಪ್ತಿಯ ಪೊಲೀಸರು ತಡೆಹಿಡಿಯಲು ಯತ್ನಿಸಿದ್ದರು.  ಈ ವೇಳೆ ಪೊಲೀಸರು ಲಾರಿ ನಿಲ್ಲಿಸಲು ಸೂಚಿಸಿದರೂ, ಚಾಲಕ ಲೆಕ್ಕಿಸದೇ ಲಾರಿಯನ್ನು ನೇರವಾಗಿ ಪೊಲೀಸರ ಕಡೆಗೆ ಹತ್ತಿಸಲು ಯತ್ನಿಸಿದ ಹಿನ್ನೆಲೆಯಲ್ಲಿ ಪುತ್ತೂರು ಗ್ರಾಮೀಣ ಠಾಣೆಯ ಸಬ್ ಇನ್ಸ್ಪೆಕ್ಟರ್ ಜಂಬುರಾಜ್ ಮಹಾಜನ್ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.

ಲಾರಿಯಲ್ಲಿ ಇದ್ದ ಮತ್ತೊಬ್ಬ ಆರೋಪಿ ಘಟನೆಯ ನಂತರ ಪರಾರಿಯಾಗಿದ್ದು ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಈ ವೇಳೆ ಲಾರಿಯಲ್ಲಿದ್ದ 10 ಗೋವುಗಳನ್ನ ರಕ್ಷಣೆ ಮಾಡಿದ್ದು ಘಟನೆ ನಂತರ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!