ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆಯೇ ಇದ್ದಾರೆ ಎಂದು ಮಾಸ್ಕ್ ಮ್ಯಾನ್ ಸಿಎನ್ ಚಿನ್ನಯ್ಯ ಅಲಿಯಾಸ್ ಚೆನ್ನ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾನೆ.
ಧರ್ಮಸ್ಥಳದಲ್ಲಿ ಉತ್ಖನನ ನಿಲ್ಲಿಸಿ ಮಾಸ್ಕ್ ಮ್ಯಾನ್‌ನನ್ನೇ ವಿಚಾರಣೆ ನಡೆಸಿದ್ದ ಎಸ್‌ಐಟಿ ಅಧಿಕಾರಿಗಳು, ಆತ ಹೇಳಿದ್ದೆಲ್ಲಾ ಬುರುಡೆ ಎಂದು ಕನ್ಫರ್ಮ್ ಆದ ಬಳಿಕ ಮಾಸ್ಕ್ ಮ್ಯಾನ್‌ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಈ ವೇಳೆ ಸತ್ಯದ ಅನಾವರಣವಾಗಿದೆ. ನನಗೆ ಈ ರೀತಿ ಹೇಳಲು ಹೇಳಿದ್ರು, ನಾನು ಈ ರೀತಿ ಹೇಳಿದೆ. ಬುರುಡೆ ತೆಗೆದುಕೊಂಡು ಕೋರ್ಟ್‌ಗೆ ಒಪ್ಪಿಸಿ ಅಂದ್ರು, ನಾನು ಒಪ್ಪಿಸಿದೆ. ಕೋರ್ಟ್‌ಗೆ ಹಾಜರುಪಡಿಸಿದ ಬುರುಡೆ ಎಲ್ಲಿಂದ ಬಂತು ನನಗೆ ಗೊತ್ತಿಲ್ಲ ಎಂದು ಮಾಸ್ಕ್ ಮ್ಯಾನ್ ಚೆನ್ನ ಹೇಳಿದ್ದಾನೆ.
ಸದ್ಯ ಆರೋಪಿ ಚೆನ್ನನಿಗೆ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಯುತ್ತಿದ್ದು, ಬಳಿಕ ಆತನನ್ನು ಎಸ್‌ಐಟಿ ಅಧಿಕಾರಿಗಳು ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ
