Wednesday, August 12, 2026
Homeಬ್ರೇಕಿಂಗ್ ನ್ಯೂಸ್ಧರ್ಮಸ್ಥಳ ಕೇಸ್:‌ ಯುಟ್ಯೂಬರ್ ಎಂ.ಡಿ. ಸಮೀರ್ ಬಂಧನಕ್ಕೆ ಪೊಲೀಸರ ಬಲೆ: ಸಿನಿಮೀಯ ರೀತಿಯಲ್ಲಿ ಪರಾರಿ!

ಧರ್ಮಸ್ಥಳ ಕೇಸ್:‌ ಯುಟ್ಯೂಬರ್ ಎಂ.ಡಿ. ಸಮೀರ್ ಬಂಧನಕ್ಕೆ ಪೊಲೀಸರ ಬಲೆ: ಸಿನಿಮೀಯ ರೀತಿಯಲ್ಲಿ ಪರಾರಿ!

Telegram Group
Join Now

ಧರ್ಮಸ್ಥಳ ಪ್ರಕರಣಕ್ಕೆ  ಸಂಬಂಧಿಸಿದಂತೆ ದಿನಕ್ಕೊಂದು ಮಹತ್ವದ ಬೆಳವಣಿಗಳು ನಡೆಯುತ್ತಿದ್ದು,  ಇದೀಗ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ರಾಷ್ಟ್ರಮಟ್ಟದಲ್ಲಿ ಸದ್ದು  ಮಾಡಲು ಪ್ರಮುಖ ಕಾರಣರಾದ ಹಾಗೂ ಧರ್ಮಸ್ಥಳ ಕ್ಷೇತ್ರಕ್ಕೆ ಅವಮಾನ ಎಸಗಿದ ಯುಟ್ಯೂಬರ್ ಎಂ.ಡಿ. ಸಮೀರ್ ನನ್ನು ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. 

ಸಮೀರ್‌ ವಿರುದ್ಧ ಸರಣಿ ದೂರುಗಳು ರಾಜ್ಯಾದ್ಯಂತ ದಾಖಲಾಗುತ್ತಿದ್ದಂತೆ ಎಚ್ಚೆತ್ತ ಗೃಹ ಇಲಾಖೆ ಆತನ ಬಂಧನಕ್ಕೆ ಸೂಚಿಸಿತ್ತು. ಅದರಂತೆ ಆತನ ಮೊಬೈಲ್‌ ಸಂಖ್ಯೆಯ ಮೂಲಕ ಜಾಗ ಪತ್ತೆ ಹಚ್ಚಿದಾಗ ಬನ್ನೇರುಘಟ್ಟದ ನಿವಾಸ ತೋರಿಸಿತ್ತು.

ಈ ಆಧಾರದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಧರ್ಮಸ್ಥಳ ಠಾಣೆಯ ಸಬ್ ಇನ್ಸ್‌ಪೆಕ್ಟರ್‌, ಇಬ್ಬರು ಪೊಲೀಸ್ ಸಿಬ್ಬಂದಿ ಸಮೀರ್‌ನನ್ನು ಬಂಧಿಸಲು ಜಿಗಣಿಯ ಹುಲ್ಲಳ್ಳಿಯ ಕ್ರೈಸ್ಟ್ ಕಾಲೇಜು ಪಕ್ಕದಲ್ಲಿರುವ ಮನೆಗೆ ಬಂದಿದ್ದಾರೆ. ಧರ್ಮಸ್ಥಳ ಪೊಲೀಸರಿಗೆ ಬನ್ನೇರುಘಟ್ಟ ಪೊಲೀಸರು ಸಾಥ್‌ ನೀಡಿದ್ದಾರೆ. 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments