Saturday, February 14, 2026
Homebig breakingDYSP ಗಣಪತಿ ಆತ್ಮಹತ್ಯೆ ಪ್ರಕರಣ - ಕೆ.ಜೆ. ಜಾರ್ಜ್‌ಗೆ ಬಿಗ್‌ ರಿಲೀಫ್..!‌

DYSP ಗಣಪತಿ ಆತ್ಮಹತ್ಯೆ ಪ್ರಕರಣ – ಕೆ.ಜೆ. ಜಾರ್ಜ್‌ಗೆ ಬಿಗ್‌ ರಿಲೀಫ್..!‌

ನವದೆಹಲಿ : ಕೊಡಗು ಮೂಲದ ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ ಜಾರ್ಜ್‌ಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಪ್ರಕರಣದಲ್ಲಿ ಅವರ ಪಾತ್ರವಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್​ ಎತ್ತಿ ಹಿಡಿದಿದೆ.
ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಸಿಬಿಐ ಮತ್ತು ಸಿಐಡಿ ತನಿಖಾ ತಂಡಗಳು ಬಿ ರಿಪೋರ್ಟ್ ಸಲ್ಲಿಸಿದ್ದವು. ಕೆ.ಜೆ. ಜಾರ್ಜ್ ಅವರ ಪಾತ್ರವಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಇದನ್ನು ಪ್ರಶ್ನಿಸಿ ಗಣಪತಿ ಕುಟುಂಬ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಇಂದು ಈ ಅರ್ಜಿ ವಿಚಾರಣೆ ನಡೆಸಿದ ನಡೆಸಿದ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ನೇತೃತ್ವದ ದ್ವಿಸದಸ್ಯ ಪೀಠ, ಹೈಕೋರ್ಟ್ ​ಆದೇಶವನ್ನು ಎತ್ತಿಹಿಡಿದಿದ್ದು, ಸಬೀತಾ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ.

ಮಂಗಳೂರು ಐಜಿಪಿ ಕಚೇರಿಯಲ್ಲಿ ಡಿವೈಎಸ್ಪಿ ಆಗಿದ್ದ ಗಣಪತಿ 2016 ಜುಲೈ 7 ರಂದು ಮಡಿಕೇರಿಯ ವಿನಾಯಕ ಲಾಡ್ಜ್‌ನ ಕೊಠಡಿ ಸಂಖ್ಯೆ 315ರಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಶರಣಾಗುವ ಮುನ್ನ ಸ್ಥಳೀಯ ಟಿವಿ ವಾಹಿನಿಗೆ ಸಂದರ್ಶನ ನೀಡಿದ್ದ ಗಣಪತಿ , ಅಂದಿನ ಗೃಹ ಸಚಿವ ಕೆ.ಜೆ.ಜಾರ್ಜ್ ಹಾಗೂ ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಂತಿ ಹಾಗೂ ಎ. ಎಂ. ಪ್ರಸಾದ್ ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ನನ್ನ ಸಾವಿಗೆ ಈ ಮೂವರೇ ಕಾರಣ ಎಂದು ಹೇಳಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!