Monday, August 4, 2025
!-- afp header code starts here -->
Homebig breakingಕ್ಯಾಟ್ರಿಡ್ಜ್ ಇದ್ದವು, ಪೊಲೀಸರೆದೆಯಲ್ಲಿ ಗುಂಡಿಗೆಯೂ ಇತ್ತು… ಟ್ರಿಗರ್ ಎಳೆಯಲು ಅವ್ರು ಬಿಡಲಿಲ್ಲ..! ರಾಜ್ಯ ಬಿಜೆಪಿಗೆ ಒಬ್ಬ...

ಕ್ಯಾಟ್ರಿಡ್ಜ್ ಇದ್ದವು, ಪೊಲೀಸರೆದೆಯಲ್ಲಿ ಗುಂಡಿಗೆಯೂ ಇತ್ತು… ಟ್ರಿಗರ್ ಎಳೆಯಲು ಅವ್ರು ಬಿಡಲಿಲ್ಲ..! ರಾಜ್ಯ ಬಿಜೆಪಿಗೆ ಒಬ್ಬ ಯೋಗಿ ಬೇಕು ಎಂದ ಮಾಜಿ ಸಂಸದ ಪ್ರತಾಪ್‌ ಸಿಂಹ..!

ಸುಳ್ಯ : ಪೊಲೀಸರನ್ನೇಕೆ ದೂರುತ್ತೀರಿ? ಪ್ರವೀಣ್ ನೆಟ್ಟಾರ್ ಕೊಲೆಯಾದಾಗ, ಶಿವಮೊಗ್ಗದಲ್ಲಿ ಹರ್ಷ ಮರ್ಡರ್ ಆದಾಗ ಕೊಲೆಗಡುಕರು ಇರುವ ಜಾಗ ಗೊತ್ತಾಗಿತ್ತು. ಪೋಲೀಸರ ಕೈಯಲ್ಲಿ ಬಂದೂಕ ಇತ್ತು. ನಳಿಕೆಯಲ್ಲಿ ಕ್ಯಾಟ್ರಿಡ್ಜ್ ಇದ್ದವು, ಪೊಲೀಸರ ಎದೆಯಲ್ಲಿ ಗುಂಡಿಗೆಯೂ ಇತ್ತು. ಆದರೆ ಟ್ರಿಗರ್ ಎಳೆಯುವಂತೆ ಆದೇಶ ನೀಡಲು ಬಿಜೆಪಿ ಸರ್ಕಾರವನ್ನು ತಡೆದವರಾರು? ಹಾಗಾಗಿಯೇ ಕರ್ನಾಟಕಕ್ಕೂ ಒಬ್ಬ ಯೋಗಿ ಬೇಕು ಎಂದು ‌ಮಾಜಿ ಸಂಸದ ಪ್ರತಾಪ್‌ಸಿಂಹ ಹೇಳಿದ್ದಾರೆ.
ವಿಶ್ವಹಿಂದು ಪರಿಷದ್ ಮತ್ತು ಸುಳ್ಯ ಮೊಸರು ಕುಡಿಕೆ ಉತ್ಸವ ಸಮಿತಿ ವತಿಯಿಂದ ನಡೆದ ಮೊಸರು ಕುಡಿಕೆ ಉತ್ಸವದಲ್ಲಿ ದಿಕ್ಸೂಚಿ ಭಾಷಣ ಮಾಡಿದರು. ಪ್ರಸ್ತುತ ರಾಜಕೀಯ ಸನ್ನಿವೇಶದಲ್ಲಿ ಕರ್ನಾಟಕಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರಂತಹ ನಾಯಕತ್ವ ಬೇಕಾಗಿದೆ. ಅಂತಹ ನಾಯಕತ್ವವನ್ನು ಹಿಂದೂ ಸಂಘಟನೆಗಳು ಸೃಷ್ಠಿಸಬೇಕು ಎಂದು ಹೇಳಿದರು. ವಿಚಾರ, ಧರ್ಮಕ್ಕೆ ನಿಷ್ಠೆ ಇರುವ ಎದೆಗಾರಿಕೆ ಇರುವ ನಾಯಕತ್ವ ಬಿಜೆಪಿಗೆ ಬೇಕು , ಅಲ್ಲದೇ ಧರ್ಮದ ಬಗ್ಗೆ ಪ್ರೀತಿ, ಅಭಿಮಾನ ಇದೆಯೇ ಎಂಬುದನ್ನು ನಾವು ಆತ್ಮ ವಿಮರ್ಶೆ ಮಾಡಿಬೇಕು. ಧರ್ಮದ ಬಗ್ಗೆ ಇರುವ ಆಭಿಮಾನ ಶೂನ್ಯತೆಯಿಂದ ಹೊರ ಬರಬೇಕು ಎಂದು ಕರೆ ನೀಡಿದರು.
ವಸುದೈವ ಕುಟುಂಬಕಂ ಎಂದು ಹಿಂದೂ ಸಮಾಜ ಶಾಂತಿ ಮತ್ತು ಸದ್ಭಾವನೆಯನ್ನು ಸದಾ ಬೋಧಿಸಿದೆ. ಜಗತ್ತಿನಲ್ಲಿ ಶಾಂತಿ, ಸದ್ಭಾವನೆ ನೆಲೆಯಾಗಲು ಎಲ್ಲರೂ ಅದನ್ನು ಪಾಲಿಸಬೇಕು ಎಂದರು. ಖಗೋಳ ವಿಜ್ಞಾನದ ಬಗ್ಗೆ, ಗೃಹಗಳ ಬಗ್ಗೆ, ಸೂರ್ಯನ ಬಗ್ಗೆ ಸಹಸ್ರಾರು ವರ್ಷಗಳ ಹಿಂದೆ ಹಿಂದೂ ಧರ್ಮ ತಿಳಿಸಿದೆ. ನಮ್ಮ ಧರ್ಮ, ಸಂಸ್ಕೃತಿ ಯ ಬಗ್ಗೆ ನಮ್ಮ ಮಕ್ಕಳಿಗೆ ತಿಳಿಸುವ ಮನಸ್ಸು ಮಾಡಬೇಕು. ನಾವು ಒಟ್ಟಾಗಿದ್ದರೆ ಮಾತ್ರ ನಮ್ಮ ಧರ್ಮ, ಸಂಸ್ಕೃತಿ ಉಳಿಯಲು ಸಾಧ್ಯ. ವೈವಿಧ್ಯತೆಯಲ್ಲಿ ಏಕತೆ ಇರುವುದು ಹಿಂದೂ ಸಮಾಜದಲ್ಲಿ‌ ಮಾತ್ರ ಎಂದು ಅವರು ಬಣ್ಣಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!