Monday, February 9, 2026
Homebig breakingಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡಿದ್ದು, ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಅವರು ಪದ್ಮನಾಭನಗರದ ನಿವಾಸಕ್ಕೆ ತೆರಳಿದ್ದಾರೆ.

ಜ್ವರ ಹಾಗೂ ಮೂತ್ರದ ಸೋಂಕಿನ ಸಮಸ್ಯೆಯಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಒಂದು ವಾರದಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ವೈದ್ಯರ ಸೂಚನೆ ಮೇರೆಗೆ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.

ಕೆಲ ದಿನಗಳ ಕಾಲ ಮನೆಯಲ್ಲೇ ಅವರು ವಿಶ್ರಾಂತಿ ಪಡೆಯಲಿದ್ದಾರೆ. ಬಿಸಿಲು, ಧೂಳಿರುವ ವಾತಾವರಣಕ್ಕೆ ಹೋಗದಂತೆ ಮತ್ತೆ ಸೋಂಕು ತಗಲದಂತೆ ಎಚ್ಚರ ವಹಿಸಬೇಕು ಎಂದು ವೈದ್ಯರು ಅವರಿಗೆ ಸಲಹೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!