Friday, August 14, 2026
Homeಬ್ರೇಕಿಂಗ್ ನ್ಯೂಸ್Free Bus Pass For All Students: ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್: ಉಚಿತ ಬಸ್...

Free Bus Pass For All Students: ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್: ಉಚಿತ ಬಸ್ ಪಾಸ್ʼಗೆ ಇಂದಿನಿಂದಲೇ ಅರ್ಜಿ ಸಲ್ಲಿಸಿ

Telegram Group
Join Now

ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಘೋಷಣೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಂದು ಸಿಹಿ ಸುದ್ದಿ ಕೊಟ್ಟಿದೆ. ಈಗಾಗಲೇ ಪಾವತಿಸಿಕೊಂಡಿರುವ ಬಸ್ ಪಾಸ್ ಶುಲ್ಕವನ್ನ ಮರುಪಾವತಿ ಮಾಡಲು 4 ಸಾರಿಗೆ ನಿಗಮಗಳಿಗೆ ಅಧಿಕೃತ ಆದೇಶ ಹೊರಡಿಸಿದೆ.

ಕರ್ನಾಟಕ ಸರ್ಕಾರವು ರಾಜ್ಯದ ಎಲ್ಲಾ ಅರ್ಹ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸಿದೆ. ವಿದ್ಯಾರ್ಥಿಗಳು ಇಂದಿನಿಂದಲೇ ಕರ್ನಾಟಕ ಸರ್ಕಾರದ Seva Sindhu Services Portal ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು。ಈಗಾಗಲೇ ಶುಲ್ಕ ಪಾವತಿಸಿ ಬಸ್ ಪಾಸ್ ಪಡೆದಿದ್ದಲ್ಲಿ, ಅದೇ ಪೋರ್ಟಲ್ ಮೂಲಕ ಹಣ ಮರುಪಾವತಿಗೆ (Refund) ಕೂಡ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ ಮಾಡಿತ್ತು. ಆದಾಗ್ಯೂ ಅರ್ಜಿ ಸಲ್ಲಿಕೆ ಸಂದರ್ಭದಲ್ಲಿ ಸಾರಿಗೆ ನಿಗಮಗಳು ನಿಯಮಾನುಸಾರ ವಿದ್ಯಾರ್ಥಿಗಳಿಂದ ಪಡೆದುಕೊಂಡಿದ್ದ ಶುಲ್ಕವನ್ನ ವಿದ್ಯಾರ್ಥಿಗಳಿಗೆ ಹಿಂದಿರುಗಿಸಲು ಆದೇಶಿಲಾಗಿದೆ.

ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಒಟಿಪಿ ಮೂಲಕ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಇದರೊಂದಿಗೆ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಯ ನಿಖರವಾದ ವಿವರಗಳನ್ನು ಸಲ್ಲಿಕೆ ಮಾಡಬೇಕು. ಸಲ್ಲಿಕೆಯಾದ ಅರ್ಜಿಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ ಬಳಿಕ, NEFT ಅಥವಾ RTGS ವಿಧಾನದ ಮುಖಾಂತರ ಕೇವಲ 7 ದಿನದ ಒಳಗೆ ವಿದ್ಯಾರ್ಥಿಗಳ ಖಾತೆಗೆ ನೇರವಾಗಿ ಹಣ ಜಮೆಯಾಗಲಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments