
ಮಡಿಕೇರಿ : ಸ್ಯಾಂಡಲ್‌ವುಡ್ ತಾರೆಯರಾದ ಉದ್ದಪಂಡ ಹರ್ಷಿಕಾ ಪೂಣಚ್ಚ ಹಾಗೂ ಉಳ್ಳಿಯಡ ಭುವನ್ ಪೊನ್ನಣ್ಣ ದಂಪತಿ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದಾರೆ.
ಬಹುಕಾಲದ ಗೆಳೆಯರಾಗಿದ್ದ ಹರ್ಷಿಕಾ ಮತ್ತು ಭುವನ್ 2023ರ ಆಗಸ್ಟ್ 24ರಂದು ದಾಂಪತ್ಯಕ್ಕೆ ಕಾಲಿಟ್ಟಿದ್ದರು. ಕೊಡಗು ಜಿಲ್ಲೆಯ ಅಮ್ಮತ್ತಿಯಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಕೊಡವ ಸಾಂಪ್ರದಾಯಿಕ ಶೈಲಿಯಲ್ಲಿ ಹೊಸ ಜೀವನಕ್ಕೆ ಕಾಲಿಟ್ಟಿದ್ದರು. ಸ್ಯಾಂಡಲ್‌ವುಡ್‌ನ ತಾರೆಯರು, ರಾಜಕೀಯ ಗಣ್ಯರು, ಕುಟುಂಬ ಸಂಬಂಧಿಗಳು, ಆಪ್ತ ಸ್ನೇಹಿತರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು.
ಇವರ ವಿವಾಹ ಸಂಭ್ರಮಕ್ಕೆ ಇಂದಿಗೆ ಒಂದು ವರ್ಷ. ಈ ಖುಷಿಯನ್ನು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹರ್ಷಿಕಾ ಹಂಚಿಕೊಂಡಿದ್ದಾರೆ. ಈ ದಂಪತಿಗೆ ಇದು ಡಬಲ್ ಸಂಭ್ರಮ. ತುಂಬು ಗರ್ಭಿಣಿಯಾಗಿರುವ ಹರ್ಷಿಕಾ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಮೊದಲ ವಾರ್ಷಿಕೋತ್ಸವ ಸಂಭ್ರಮಕ್ಕೆ ಇನ್ನು ಕೆಲವೇ ದಿನದಲ್ಲಿ ಹೊಸ ಸದಸ್ಯರ ಸೇರ್ಪಡೆಯೂ ಆಗಲಿದೆ. ಈ ಖುಷಿಯನ್ನ ಡಿಫರೆಂಟ್ ಸ್ಟೈಲ್‌ನಲ್ಲಿ ಫೋಟೋಶೂಟ್ ಮಾಡಿಸಿಕೊಂಡು ಸಂಭ್ರಮಿಸ್ತಿದ್ದಾರೆ.







