Monday, August 10, 2026
Homeಬ್ರೇಕಿಂಗ್ ನ್ಯೂಸ್ಮುಂದಿನ 5 ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ, ಮುಂದಿನ ಬಜೆಟ್‌ಗಳನ್ನು ನಾನೇ ಮಂಡಿಸುವೆ- ಸಿಎಂ ಸಿದ್ದರಾಮಯ್ಯ

ಮುಂದಿನ 5 ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ, ಮುಂದಿನ ಬಜೆಟ್‌ಗಳನ್ನು ನಾನೇ ಮಂಡಿಸುವೆ- ಸಿಎಂ ಸಿದ್ದರಾಮಯ್ಯ

Telegram Group
Join Now

ಮೈಸೂರು: ರಾಜ್ಯ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ ಜೋರಾಗಿದೆ. ಅಧಿಕಾರ ಬದಲಿಯ ಹಗ್ಗಜಗ್ಗಾಟದಲ್ಲಿ ಕಾಂಗ್ರೆಸ್‌ನ ಕೆಲ ಶಾಸಕರು ದೆಹಲಿಗೆ ದೌಡಯಿಸಿದ್ದಾರೆ. ಈ ವಿಚಾರಕ್ಕೆ ಕಡ್ಡಿಮುರಿದಂತೆ ಸಿಎಂ ಸಿದ್ದರಾಮಯ್ಯ(CM Siddaramaiah) ಪ್ರತಿಕ್ರಿಯೆ ನೀಡಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DCM Dk Shivakumar) ಬಣಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಶುಕ್ರವಾರ ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನರ್ರಚನೆ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ. ವರಿಷ್ಠರ ತೀರ್ಮಾನಕ್ಕೆ ಪಕ್ಷದ ಪ್ರತಿಯೊಬ್ಬರೂ ಬದ್ಧರಾಗಿರಬೇಕು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದಂತೆ ನಾನೆಂದೂ ಮಾತಿಗೆ ತಪ್ಪುವುದಿಲ್ಲ. ರಾಜ್ಯದ ಜನರಿಗೆ ನೀಡಿದ ಗ್ಯಾರಂಟಿಯ ಭರವಸೆಯನ್ನು ಈಡೇರಿಸಿದ್ದೇನೆ. ಮುಖ್ಯಮಂತ್ರಿಯಾಗಿ ನಾನೇ ಮುಂದುವರೆದು, ಮುಂದಿನ ಬಜೆಟ್ ಗಳನ್ನು ನಾನೇ ಮಂಡಿಸುವೆ, ನಿಮಗೆ ಯಾಕೆ ಅನುಮಾನ? ಮತ್ತೆ ಮತ್ತೆ ಅದನ್ನೇ ಏಕೆ ಕೇಳುತ್ತೀರಿ? ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಮಾತನಾಡಿದೆಯಾ? ನಾಯಕತ್ವ, ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತೆ. ಈ ಬಗ್ಗೆ ಹೈಕಮಾಂಡ್ ಇಲ್ಲಿಯವರೆಗೆ ಏನಾದ್ರೂ ಮಾತನಾಡಿದೆಯಾ? ಹೈಕಮಾಂಡ್​ ಈ ಬಗ್ಗೆ ಮಾತಾಡಿಲ್ಲ. ಹಾಗಾದ್ರೆ ಮತ್ತೆ ಯಾಕೆ ಆ ಪ್ರಶ್ನೆ? ಹೈಕಮಾಂಡ್ ಹೇಳಿದ್ದನ್ನು ನಾನು, ಡಿಸಿಎಂ ಡಿಕೆ, ಶಾಸಕರು ಪಾಲಿಸಬೇಕು ಎಂದು ಹೇಳುವ ಮೂಲಕ ಡಿಕೆ ಶಿವಕುಮಾರ್‌ ಬಣಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಮುಂದುವರೆದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂದು ಪಕ್ಷದ ವರಿಷ್ಠರಾದ ಮಲ್ಲಿಕಾರ್ಜುನ ಖರ್ಗೆಯವರು ಬೆಂಗಳೂರಿಗೆ ಆಗಮಿಸಲಿದ್ದು, ನಾಳೆ ಅವರನ್ನು ಭೇಟಿಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments