Thursday, July 2, 2026
Homeಕ್ರೈಮ್ಅಕ್ರಮ ಆಸ್ತಿ ಗಳಿಕೆ ಪ್ರಕರಣ - ಜಯಲಲಿತಾ ವಾರಸುದಾರೆ ಸಲ್ಲಿಸಿದ್ದ ಅರ್ಜಿ ವಜಾ : ಜಪ್ತಿಯಾದ...

ಅಕ್ರಮ ಆಸ್ತಿ ಗಳಿಕೆ ಪ್ರಕರಣ – ಜಯಲಲಿತಾ ವಾರಸುದಾರೆ ಸಲ್ಲಿಸಿದ್ದ ಅರ್ಜಿ ವಜಾ : ಜಪ್ತಿಯಾದ ಒಡವೆ ಸರ್ಕಾರದ ಪಾಲು

Telegram Group
Join Now

ಬೆಂಗಳೂರು : ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಪ್ತಿಯಾದ ಒಡವೆ ತಮಿಳುನಾಡು ಸರ್ಕಾರಕ್ಕೆ ಹಿಂತಿರುಗಿಸಲು ಹೈಕೋರ್ಟ್ ಅನುಮತಿ ಆಕ್ಷೇಪಿಸಿದ್ದ ಜಯಲಲಿತಾ ವಾರಸುದಾರೆ ಜೆ.ದೀಪಾ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ನ್ಯಾ.ವಿ.ಶ್ರೀಶಾನಂದ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಸೋಮವಾರ ಆದೇಶ ಹೊರಡಿಸಿದೆ.
ಕಳೆದ ವರ್ಷ ಮಾರ್ಚ್ 6, 7ರಂದು ಒಡವೆ ಹಸ್ತಾಂತರಿಸಬೇಕಿತ್ತು. ಆದರೆ ವಿಶೇಷ ಕೋರ್ಟ್ ಆದೇಶದಿಂದ ತಮ್ಮ ಹಕ್ಕಿಗೆ ಧಕ್ಕೆ ಎಂದು ಜಯಲಲಿತಾ ವಾರಸುದಾರೆ ಜೆ.ದೀಪಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸುಪ್ರೀಂಕೋರ್ಟ್ ಆದೇಶದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಜೆ.ದೀಪಾ ಅರ್ಜಿಗೆ ಎಸ್‌ಪಿಪಿ ಕಿರಣ್ ಜವಳಿ ಆಕ್ಷೇಪಣೆ ಸಲ್ಲಿಸಿದ್ದರು. ತಮಿಳುನಾಡು ಸರ್ಕಾರದ ಪರ ಹಿರಿಯ ವಕೀಲ‌ ಸಂದೇಶ್ ಚೌಟ ವಾದಿಸಿದ್ದರು. ವಿಚಾರಣೆ ನಡೆಸಿ ಜೆ.ದೀಪಾ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಒಡವೆ ಸ್ವೀಕರಿಸಲು ತಮಿಳುನಾಡಿನಿಂದ ಇಬ್ಬರು ಅಧಿಕಾರಿಗಳ ನೇಮಕ ಮಾಡಲಾಗಿತ್ತು. ತಮಿಳುನಾಡು ಗೃಹ ಪ್ರಧಾನ ಕಾರ್ಯದರ್ಶಿ ಮತ್ತು ಐಜಿಪಿ ವಿಜಿಲೆನ್ಸ್ ಹಾಜರಿರಬೇಕು. ಒಡವೆ ತೆಗೆದುಕೊಂಡು ಹೋಗಲು 6 ಟ್ರಂಕ್​ಗಳನ್ನು ತರುವಂತೆ ಕೋರ್ಟ್ ಸೂಚನೆ ನೀಡಿತ್ತು. ವಿಡಿಯೋಗ್ರಾಫರ್, ಫೋಟೋಗ್ರಾಫರ್, ಎರಡೂ ದಿನಗಳು ಸಿಟಿ ಸಿವಿಲ್ ಕೋರ್ಟ್​ನಲ್ಲಿ ಭದ್ರತೆ ಒದಗಿಸುವಂತೆ ವಿಶೇಷ ನ್ಯಾಯಾಧೀಶ ಮೋಹನ್​ರಿಂದ ಸೂಚನೆ ನೀಡಲಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments