Friday, June 26, 2026
Homebig breakingJob Recruitment: ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ  ಪ್ರಕ್ರಿಯೆ

Job Recruitment: ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ  ಪ್ರಕ್ರಿಯೆ

ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ  ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಒಟ್ಟು 72,186 ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಲಾಗಿದ್ದು, ಈ ಕುರಿತು ಉನ್ನತ ಮಟ್ಟದ ಅಧಿಕಾರಿಗಳಿಗೆ ಮೇಲುಸ್ತುವಾರಿ ಜವಾಬ್ದಾರಿ ನೀಡಲಾಗಿದೆ.

2023-24ನೇ ಸಾಲಿನಿಂದ ಇಲ್ಲಿಯವರೆಗೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 40,009 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಸಹಮತಿ ನೀಡಿದೆ. ಕಲ್ಯಾಣ-ಕರ್ನಾಟಕ ಸ್ಥಳೀಯ ವೃಂದದಲ್ಲಿ ಖಾಲಿ ಇರುವ 32,177 ಹುದ್ದೆಗಳ ಪೈಕಿ ಶೇ.80 ರಷ್ಟು ಹುದ್ದೆಗಳನ್ನು ಭರ್ತಿ ಮಾಡಲು ಸಹಮತಿ ನೀಡಲಾಗಿದೆ.

ಈ ಸಂಬಂಧ ಇನ್ನೂ 2 ತಿಂಗಳಲ್ಲಿ ನೇಮಕಾತಿ ಅಧಿಸೂಚನೆ ಹೊರಡಿಸಿ, ಮುಂದಿನ 4 ತಿಂಗಳಲ್ಲಿ ನೇಮಕಾತಿ ಪರೀಕ್ಷೆಗಳನ್ನ ನಡೆದಲು, ಒಟ್ಟಾರೆ 6 ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆಗಳನ್ನ ಪೂರ್ಣಗೊಳಿಸಿ ನೇಮಕಾತಿಗೆ ಆದೇಶ ನೀಡಲು ಸೂಚಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments