ಶಿವಮೊಗ್ಗ : ಕಡವೆ ಶಿಕಾರಿ ಮಾಡಿದ್ದ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಬಂಧಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಶಿವ, ವೆಂಕಟೇಶ್, ಮಂಜಪ್ಪ, ವಿನೋದ್ ಬಂಧಿತ ಆರೋಪಿಗಳು. ಉಂಬ್ಳೇಬೈಲು ಅರಣ್ಯ ವ್ಯಾಪ್ತಿಯಲ್ಲಿ ಕಡವೆ ಶಿಕಾರಿ ಮಾಡಿದ್ದ ನಾಲ್ವರು ಮಾಂಸ ಮಾಡಿ ಮಾರಾಟಕ್ಕೆ ಮುಂದಾಗಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಅರಿತ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಮಾಂಸ ಸಹಿತ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಉಂಬ್ಳೇಬೈಲು ವಲಯ ಅರಣ್ಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



