Advertisement

Homebig breakingKSRTC ಬಸ್ ಮತ್ತು ಕ್ಯಾಂಟರ್‌ ಮುಖಾಮುಖಿ ಡಿಕ್ಕಿ - ಐವರು ಸ್ಥಳದಲ್ಲೇ ದುರ್ಮರಣ

KSRTC ಬಸ್ ಮತ್ತು ಕ್ಯಾಂಟರ್‌ ಮುಖಾಮುಖಿ ಡಿಕ್ಕಿ – ಐವರು ಸ್ಥಳದಲ್ಲೇ ದುರ್ಮರಣ

ತಮಿಳುನಾಡು : KSRTC ಬಸ್ ಮತ್ತು ಕ್ಯಾಂಟರ್ ನಡುವೆ‌ ಸಂಭವಿಸಿದ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ತಮಿಳುನಾಡಿನ ರಾಣಿಪೇಟೆಯಲ್ಲಿ ಸಂಭವಿಸಿದೆ.
ಬಸ್‌ ಚಾಲಕ ಮತ್ತು ಕ್ಯಾಂಟರ್‌ನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬಸ್​ನಲ್ಲಿದ್ದ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಕ್ಯಾಂಟರ್ ಚಾಲಕ ಮಂಜುನಾಥ್, ಕ್ಲೀನರ್ ಶಂಕರ್, ಸಹಾಯಕ ಸೋಮಶೇಖರ್, ವೆಂಕಟೇಶ್ ನಗರ ಗ್ರಾಮದ ರೈತ ಕೃಷ್ಣಪ್ಪ ಮೃತ ಮೃತಪಟ್ಟವರು ಎಂದು ಗುರುತಿಸಲಾಗಿದೆ. ನಲ್ಲೂರು ಗ್ರಾಮದ ಸರಸ್ವತಮ್ಮ ಸ್ಥಿತಿ ಗಂಭೀರವಾಗಿದೆ. ಮೃತಪಟ್ಟವರ ಪೈಕಿ ನಾಲ್ವರು ಕೋಲಾರ ಮೂಲದವರು.
ಮುಳಬಾಗಿಲು ತಾಲೂಕಿನ ನಲ್ಲೂರು ಗ್ರಾಮದ 50 ಮಂದಿ ತಮಿಳುನಾಡಿನ ಓಂಶಕ್ತಿ ದೇವಾಲಯಕ್ಕೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತೀರ್ಥಯಾತ್ರೆ ತೆರಳಿ ವಾಪಸ್ಸಾಗುತ್ತಿದ್ದರು. ಈ ಸಂದರ್ಭ ಸೀಗೆಹಳ್ಳಿ ಗ್ರಾಮದಿಂದ ಚೆನ್ನೈಗೆ ತರಕಾರಿ ತುಂಬಿಕೊಂಡು ಹೋಗುತ್ತಿದ್ದ ಕ್ಯಾಂಟರ್ ಮತ್ತು ಬಸ್ ನಡುವೆ ಡಿಕ್ಕಿಯಾಗಿದೆ. ರಾಣಿಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!