Sunday, August 16, 2026
Homeಬ್ರೇಕಿಂಗ್ ನ್ಯೂಸ್LPG cylinder price: ಹೊಸ ವರ್ಷದ ದಿನವೇ ಬಿಗ್ ಶಾಕ್: ಕಮರ್ಷಿಯಲ್ ಗ್ಯಾಸ್ ಬೆಲೆ ಭರ್ಜರಿ...

LPG cylinder price: ಹೊಸ ವರ್ಷದ ದಿನವೇ ಬಿಗ್ ಶಾಕ್: ಕಮರ್ಷಿಯಲ್ ಗ್ಯಾಸ್ ಬೆಲೆ ಭರ್ಜರಿ ಹೆಚ್ಚಳ

Telegram Group
Join Now

ಹೊಸ ವರ್ಷದ ದಿನವೇ ಅನಿಲ ಕಂಪನಿಗಳು ಜನ ಸಾಮಾನ್ಯರಿಗೆ ಬಿಗ್ ಶಾಕ್ ಕೊಟ್ಟಿದೆ. 2026ರ ಆರಂಭದಲ್ಲೇ ಬೆಲೆ ಏರಿಕೆಯ ಬಾಂಬ್ ಸಿಡಿಸಿದೆ. ಸಿಲಿಂಡರ್ ಬೆಲೆಗಳಲ್ಲಿ ಭಾರೀ ಏರಿಕೆ ಆಗಿದೆ. 

2025ರಲ್ಲಿ 200 ರೂಗೂ ಹೆಚ್ಚು ಇಳಿಕೆ ಕಂಡಿದ್ದ ಕಮರ್ಷಿಯಲ್ ಎಲ್​ಪಿಜಿ ಗ್ಯಾಸ್ ಬೆಲೆ ಏರಿಕೆ ಆಗಿದೆ. ಆದರೆ, ಗೃಹಬಳಕೆ ಗ್ಯಾಸ್ ಬೆಲೆಯಲ್ಲಿ ಏರಿಕೆ ಆಗಿಲ್ಲ. 19 ಕಿಲೋ ಮತ್ತು 47.50 ಕಿಲೋ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್​ಗಳು ದುಬಾರಿಯಾಗಿವೆ. 19 ಕಿಲೋ ಎಲ್​ಪಿಜಿ ಸಿಲಿಂಡರ್ ಬೆಲೆ 110 ರೂನಿಂದ 112 ರೂನಷ್ಟು ಏರಿದೆ. ಬೆಂಗಳೂರಿನಲ್ಲಿ 110.50 ರೂ ಬೆಲೆ ಹೆಚ್ಚಳ ಆಗಿದೆ. ಇನ್ನು, 47.50 ಕಿಲೋ ತೂಕದ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 274.50 ರೂ ಏರಿಕೆ ಆಗಿದ್ದು, 4,407 ರೂ ಗಡಿ ಮುಟ್ಟಿದೆ.

ಕಮರ್ಷಿಯಲ್ ಗ್ಯಾಸ್ ಬೆಲೆ ಏರಿಕೆಯಿಂದ ಹೋಟೆಲ್ ಉದ್ಯಮದ ಮೇಲೆ ಪರಿಣಾಮ ಬೀರುತ್ತದೆ. ಅಡುಗೆ ವೆಚ್ಚ ಏರಿಕೆಯಾಗಿ, ಅಂತಿಮವಾಗಿ ಗ್ರಾಹಕರಿಗೆ ಊಟದ ಬಿಲ್​ನಲ್ಲಿ ಏರಿಕೆ ಆಗುತ್ತದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments