ಮಂಗಳೂರು : ಸಮಾಜ ಸೇವಕ, ಉದ್ಯಮಿ ಮುಮ್ತಾಝ್ ಅಲಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಅಬ್ದುಲ್ ಸತ್ತಾರ್ ಬಂಧಿತ ವ್ಯಕ್ತಿ. ಈತನ ವಿರುದ್ಧ ಬ್ಲ್ಯಾಕ್‌ಮೇಲ್ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ಪಕ್ಷದ ಎಲ್ಲಾ ಜವಾಬ್ದಾರಿಯಿಂದ ಮುಕ್ತಗೊಳಿಸಲಾಗಿದೆ. ಮಾತ್ರವಲ್ಲ ಆರು ವರ್ಷ ಕಾಲ ಉಚ್ಛಾಟಿಸಲಾಗಿದೆ ಎಂದು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಬ್ದುಲ್ ಸತ್ತಾರ್ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿ ಪಕ್ಷಕ್ಕೆ ತೀವ್ರ ಮುಜುಗರ ತಂದಿದ್ದು, ಅದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಹೀಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಮೊಯ್ದಿನ್ ಬಾವ ಸಹೋದರನ ಸಾವು ಪ್ರಕರಣ – ಕೈ ಮುಖಂಡನ ಕೈವಾಡ? – ಪಕ್ಷದಿಂದ ಶಿಸ್ತು ಕ್ರಮ..
RELATED ARTICLES