ಬೆಂಗಳೂರು : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ಮೆರವಣಿಗೆ ವೇಳೆ ನಡೆದ ಗಲಭೆ ವಿಚಾರವಾಗಿ ರಾಜಕೀಯ ಪಕ್ಷಗಳು ತಮ್ಮ ಮೂಗಿನ ನೇರಕ್ಕೆ ವಿಶ್ಲೇಷಣೆ ಮಾಡುತ್ತಿವೆ. ಘಟನಾ ಸ್ಥಳಕ್ಕೆ ವಿವಿಧ ರಾಜಕೀಯ ಪಕ್ಷಗಳ ನಿಯೋಗ, ರಾಜಕೀಯ ಮುಖಂಡರು ಭೇಟಿ ನೀಡುತ್ತಿದ್ದು ರಾಜಕೀಯವಾಗಿ ತೀವ್ರ ಚರ್ಚೆಯಾಗುತ್ತಿದೆ.
ಈ ನಡುವೆ ವಿಪಕ್ಷ ಬಿಜೆಪಿ ಘಟನೆ ಸಂಬಂಧ ಸತ್ಯಶೋಧನಾ ಸಮಿತಿಯನ್ನು ರಚನೆ ಮಾಡಿದೆ. ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಶಾಸಕ ಭೈರತಿ ಬಸವರಾಜ, ಮಾಜಿ ಸಚಿವ ಕೆ.ಸಿ. ನಾರಾಯಣಗೌಡ, ರಾಜ್ಯ ಕಾರ್ಯದರ್ಶಿ ಲಕ್ಷ್ಮೀ ಅಶ್ವಿನ್ ಗೌಡ, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರನ್ನೊಳಗೊಂಡ ಸಮಿತಿ ರಚನೆ ಮಾಡಿದ್ದು, ಘಟನಾ ಸ್ಥಳಕ್ಕೆ ತೆರಳಿ ಘಟನೆಯ ಕುರಿತು ಸತ್ಯಾಸತ್ಯತೆ ಪರಿಶೀಲಿಸಿ ಒಂದು ವಾರದೊಳಗೆ ನಿರ್ದೇಶಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.