ಬೆಂಗಳೂರು : ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ಗೆ ರಾಜಾತಿಥ್ಯ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅಚ್ಚರಿಯ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಈ ಥರ ನಡೆಯುತ್ತಿರೋದು ಇದೇ ಮೊದಲಲ್ಲ, ಈ ಹಿಂದಿನಿಂದಲೂ ನಡೆದುಕೊಂಡು ಬಂದಿದೆ ಅಂತ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು.
ಈ ಹಿಂದೆ ವಿಚಾರದಲ್ಲಿ ದೊಡ್ಡ ಗಲಾಟೆಯೇ ಆಗಿದೆ. ಜೈಲಿನ ಕೈದಿಗಳಿಗೆ ಪಂಚತಾರಾ ಹೋಟೆಲ್ ಥರ ಆಗಿದೆ. ದರ್ಶನ್ ವಿಚಾರದಲ್ಲಿ ಪ್ರಚಾರ ಆಗಿದೆ. ಈ ಸರ್ಕಾರದ ಮೇಲೆ ಜನರಿಗೆ ನಂಬಿಕೆ ಇಲ್ಲದಾಗಿದೆ. ರಾಜ್ಯದಲ್ಲಿ ಸರ್ಕಾರ ಇದೆ ಅನ್ನುವ ಭಾವನೆಯೇ ಇಲ್ಲದಾಗಿದೆ ಎಂದು ಕಿಡಿಕಾರಿದರು.
ಮುಖ್ಯಮಂತ್ರಿಗೆ ಆಡಳಿತ ನಡೆಸೋದಕ್ಕೆ ಸಮಯ ಇಲ್ಲ. ಹಗರಣಗಳಿಗೆ ಸಮಜಾಯಿಷಿ ನೀಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ. ಇನ್ನೆಲ್ಲಿ ಅವರು ಆಡಳಿತದಲ್ಲಿ ತೊಡಗಿಸಿಕೊಳ್ಳುವುದು ಎಂದು ಪ್ರಶ್ನಿಸಿದರು.
