Sunday, October 18, 2026
Homeಕ್ರೈಮ್ಗೃಹಸಚಿವ ಹೇಳಿಕೆ ಖಂಡಿಸಿ ಶಿವಮೊಗ್ಗದಲ್ಲಿ ಹಿಂದು ಸಂಘಟನೆಗಳ ಪ್ರತಿಭಟನೆ…

ಗೃಹಸಚಿವ ಹೇಳಿಕೆ ಖಂಡಿಸಿ ಶಿವಮೊಗ್ಗದಲ್ಲಿ ಹಿಂದು ಸಂಘಟನೆಗಳ ಪ್ರತಿಭಟನೆ…

Telegram Group
Join Now

ಶಿವಮೊಗ್ಗ : ನಾಗಮಂಗಲ ಗಲಭೆ ಹಾಗೂ ಗೃಹ ಸಚಿವರ ಹೇಳಿಕೆ ಖಂಡಿಸಿ ವಿಶ್ವ ಹಿಂದು ಪರಿಷತ್‌ ಬಜರಂಗದಳ ವತಿಯಿಂದ ಪ್ರತಿಭಟನೆ ನಡೆಯಿತು.
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ದ ಘೊಷಣೆ ಕೂಗಿ ಆಕ್ರೋಶ ಹೊರಹಾಕಿದರು. ಹಿಂದುಗಳನ್ನು ರಕ್ಷಿಸುವಲ್ಲಿ ಸರ್ಕಾರ ವಿಫಲವಾಗಿದೆ. ನಾಗಮಂಗಲ ಘಟನೆಗೆ ಕಾರಣರಾದ ನೈಜ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಘಟನೆ ಕುರಿತು ಗೃಹಸಚಿವರು ಉಡಾಫೆ ಉತ್ತರ ನೀಡುತ್ತಿದ್ದಾರೆ. ಇದೊಂದು ಸಣ್ಣ ಘಟನೆ ಎಂಬಂತೆ ಸಚಿವರು ಹೇಳಿರುವುದು ಸರಿಯಲ್ಲ. ಈ ಘಟನೆಯನ್ನು ಸರ್ಕಾರ ಲಘುವಾಗಿ ಪರಿಗಣಿಸಿದೆ. ಈ ನಿಲುವು ಮುಂದುವರೆದರೆ ಮುಂದೆ ಮತ್ತಷ್ಟು ಅನಾಹುತಗಳು ಸಂಭವಿಸಬಹುದು. ಅದಕ್ಕೂ ಮುನ್ನ ಸರ್ಕಾರ ಎಚ್ಚೆತ್ತುಕೊಳ್ಳಬೇಕೆಂದು ಒತ್ತಾಯಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!