Thursday, July 2, 2026
Homeಆಧ್ಯಾತ್ಮತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್..!

ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್..!

Telegram Group
Join Now

ಮೈಸೂರು : ರೇಣುಕಾಸ್ವಾಮಿ ಕೊಲೆ ಕೇಸ್‌ನ ಪ್ರಮುಖ ಆರೋಪಿಯಾಗಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ಈಗ ಮತ್ತೆ ಸೋಷಿಯಲ್‌ ಲೈಫ್‌ನಲ್ಲಿ ಸಕ್ರಿಯರಾಗುತ್ತಿದ್ದಾರೆ. ಎರಡು ದಿನದ ಹಿಂದಷ್ಟೇ ಕುಟುಂಬದ ಜೊತೆ ಸಂಕ್ರಾಂತಿ ಆಚರಿಸಿಕೊಂಡಿದ್ದ ದರ್ಶನ್‌, ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಪತ್ನಿ ವಿಜಯಲಕ್ಷ್ಮಿ ಹಾಗೂ ಸ್ನೇಹಿತರ ಜೊತೆ ಚಾಮುಂಡಿ ಬೆಟ್ಟಕ್ಕೆ ದರ್ಶನ್ ಭೇಟಿಯಿತ್ತರು. ಕುಟುಂಬ ಸದಸ್ಯರೊಡಗೂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ, ದೇವಸ್ಥಾನದಲ್ಲಿ ನಟನ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಫ್ಯಾನ್ಸ್ ಮುಗಿಬಿದ್ದಿದ್ದ ಪ್ರಸಂಗವೂ ಎದುರಾಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments