ಧರ್ಮಸ್ಥಳ: ಮಾಜಿ ಸಚಿವ ಮತ್ತು ಹೊಳೆನರಸೀಪುರ ಶಾಸಕ ಎಚ್.ಡಿ. ರೇವಣ್ಣ ದೇವಸ್ಥಾನಗಳ ಭೇಟಿ ಮುಂದುವರಿಸಿದ್ದಾರೆ.ಇಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ರೇವಣ್ಣ ಮಂಜುನಾಥ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ.

ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ದೇವಳದ ಸಿಬ್ಬಂದಿ ರೇವಣ್ಣ ಅವರನ್ನು ಸ್ವಾಗತಿಸಿದರು.ಇಂದು ದೇವರ ದರ್ಶನದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿಯೇ ಧರ್ಮಸ್ಥಳಕ್ಕೆ ಆಗಮಿಸಿ ರೇವಣ್ಣ ವಾಸ್ತವ್ಯ ಹೂಡಿದ್ದರು
ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಶಾಸಕ ಎಚ್.ಡಿ. ರೇವಣ್ಣ ನಿರಂತರವಾಗಿ ದೇಗುಲಗಳಿಗೆ ಭೇಟಿ ನೀಡುತ್ತಿದ್ದಾರೆ.
