ತಿರುಪತಿ ವರದಿ(ಜ.08) : ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಕಾಲ್ತುಳಿತ ಸಂಭವಿಸಿದ್ದು, ಕನಿಷ್ಠ 04 ಮಂದಿ ಮೃತರಾಗಿದ್ದಾರೆಂದು ವರದಿಯಾಗಿದೆ. ಹಲವರು ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ.
ವೈಕುಂಠ ದ್ವಾರ ದರ್ಶನಕ್ಕಾಗಿ ಭಕ್ತರು ಟಿಕೆಟ್ ತೆಗೆದುಕೊಳ್ಳುವ ವೇಳೆ ನೂಕುನುಗ್ಗಲು ಉಂಟಾಗಿದೆ. ಟಿಕೆಟ್‌ಗಾಗಿ ಏಕಕಾಲಕ್ಕೆ ಸಾವಿರಾರು ಮಂದಿ ನುಗ್ಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಒಬ್ಬ ಮಹಿಳೆ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಉಳಿದವರು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮೃತರಾಗಿದ್ದಾರೆ.
ಜನವರಿ 10 ರಂದು ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಕೌಂಟರ್‌ಗಳಲ್ಲಿ ನಾಳೆ ಬೆಳಗ್ಗೆಯಿಂದ ಟಿಕೆಟ್ ವಿತರಣೆಗೆ ನಿರ್ಧರಿಸಲಾಗಿತ್ತು. ಒಂದು ದಿನ ಮುಂಚಿತವಾಗಿಯೇ ಸಾವಿರಾರು ಮಂದಿ ಮುಗಿಬಿದ್ದಿದ್ದರಿಂದ ಈ ಅವಘಡ ಸಂಭವಿಸಿದೆ. ಗಾಯಗೊಂಡಿರುವ ಭಕ್ತರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜನವರಿ 10, 11, 12ರ ವೈಕುಂಠ ದ್ವಾರ ದರ್ಶನದ ಟಿಕೆಟ್‌ಗಳ ವಿತರಣೆಗೆ ಟಿಟಿಡಿ ಮುಂದಾಗಿತ್ತು. ಗುರುವಾರ ಬೆಳಗ್ಗೆ 05 ಗಂಟೆಯಿಂದ ವಿತರಣೆಗೆ ಟಿಟಿಟಿ ನಿರ್ಧರಿಸಿತ್ತು. ಆದರೆ ಬುಧವಾರ ಮಧ್ಯರಾತ್ರಿಯಿಂದಲೇ ಟಿಕೆಟ್ ವಿತರಣೆ ನಡೆಯಲಿದೆ ಎಂದು ಮಾಹಿತಿ ಹರಿದಾಡಿದ ಹಿನ್ನೆಲೆ ಏಕಾಏಕಿ ಭಕ್ತರು ಮುಗಿಬಿದ್ದಿದ್ದಾರೆ. ದುರ್ಘಟನೆ ಬಳಿಕ ಟಿಕೆಟ್ ವಿತರಣೆಗೆ ಟಿಟಿಡಿ ಯಾವ ರೀತಿ ಕ್ರಮ ಕೈಗೊಳ್ಳಲಿದೆ ಅನ್ನೋದು ಇನ್ನಷ್ಟೇ ತಿಳಿಯಬೇಕಿದೆ.
ತಿಮ್ಮಪ್ಪನ ದರ್ಶನದ ಟಿಕೆಟ್ ಖರೀದಿಗೆ ನೂಕುನುಗ್ಗಲು – ತಿರುಪತಿಯಲ್ಲಿ ಕಾಲ್ತುಳಿತಕ್ಕೆ 04 ಮಂದಿ ದುರ್ಮರಣ
RELATED ARTICLES
