ಬೆಂಗಳೂರು: ಇತ್ತೀಚೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರಣಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸಿಎಂ ಸಿದ್ದರಾಮಯ್ಯ ಅವರು ಯುವಜನರು ಹಾಗೂ ಮಧ್ಯ ವಯಸ್ಕರಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ” ಜನರ ಆರೋಗ್ಯ ರಕ್ಷಣೆಗಾಗಿ ಒಂದು ಸರ್ಕಾರವಾಗಿ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ನಾವು ಮಾಡುತ್ತಿದೆ. ಯುವಜನರು, ಮಧ್ಯ ಮಯಸ್ಕರು ಹಾಗೂ ಇತರೆ ಜನ ಎದೆನೋವು, ಉಸಿರಾಟದ ತೊಂದರೆ ಕಂಡುಬಂದರೆ ಅಲಕ್ಷ್ಯ ತೋರದೆ ತಕ್ಷಣವೇ ಸಮೀಪದ ಆರೋಗ್ಯ ಕೇಂದ್ರಗಳಿಗೆ ತೆರಳಿ ಪರೀಕ್ಷೆಗೆ ಒಳಗಾಗಬೇಕು. ವೈದ್ಯರ ಸೂಚನೆ ಪಾಲಿಸಬೇಕು ” ಎಂದು ವಿನಂತಿಸಿದ್ದಾರೆ
ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯಲ್ಲಿ 20ಕ್ಕೂ ಹೆಚ್ಚು ಹೃದಯಾಘಾತ ಪ್ರಕರಣಗಳು ಕಂಡು ಬಂದಿದ್ದು ಹೀಗಾಗಿ ನೈಜ ಕಾರಣ ಪತ್ತೆಮಾಡಿ, ತಡೆಯುವ ನಿಟ್ಟಿನಲ್ಲಿ ನಾವು ಸಂಪೂರ್ಣ ಬದ್ಧರಿದ್ದೇವೆ. ಈ ಉದ್ದೇಶದಿಂದಲೇ ಹೃದಯ ಜ್ಯೋತಿ ಮತ್ತು ಗೃಹ ಆರೋಗ್ಯದಂತಹ ಯೋಜನೆಗಳನ್ನು ಈಗಾಗಲೇ ಜಾರಿಗೆಕೊಟ್ಟು, ಸಾರ್ವಜನಿಕರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ ಎಂದು ತಿಳಿಸಿದರು.
ಹಾಗೆ ಬದುಕಿ ಬಾಳಬೇಕಾದ ಚಿಕ್ಕಮಕ್ಕಳು, ಯುವಜನರು, ಅಮಾಯಕರ ಜೀವಗಳ ಬೆಲೆ, ಅವರ ಕುಟುಂಬಸ್ಥರ ಕಾಳಜಿ ನಮಗೂ ಇದೆ. ಇಂತಹ ವಿಚಾರಗಳನ್ನು ಕೂಡ ತಮ್ಮ ರಾಜಕೀಯ ಸಾಧನೆಗೆ ಬಳಕೆ ಮಾಡಿಕೊಳ್ಳುತ್ತಿರುವ ಬಿಜೆಪಿ ನಾಯಕರ ನಡೆಯನ್ನು ನಾನು ಖಂಡಿಸುತ್ತೇನೆ ಎಂದು ಕಿಡಿಕಾರಿದ್ದಾರೆ.