ಬೆಳ್ತಂಗಡಿ : ಜಾಮೀನು ಸಿಕ್ಕ ಬೆನ್ನಲ್ಲೇ ಮಹೇಶ್ ಶೆಟ್ಟಿ ತಿಮರೋಡಿಗೆ ಎಸ್ ಐಟಿ ಬಿಗ್ ಶಾಕ್ ಕೊಟ್ಟಿದೆ. ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂಕು ಹಾಕಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೂರುದಾರ ಚಿನ್ನಯ್ಯನಿಗೆ ಆಶ್ರಯ ನೀಡಿದ್ದಕ್ಕಾಗಿ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಮೇಲೆ ಆ.26 ರಂದು ಬೆಳಗ್ಗೆ 9:20 ಗಂಟೆಗೆ ಎಸ್.ಐ.ಟಿ ದಾಳಿ ಮಾಡಿದೆ.
ಎಸ್ ಐಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ನೇತೃತ್ವದ ಅಧಿಕಾರಿಗಳ ತಂಡ ಬೆಳ್ತಂಗಡಿ ನ್ಯಾಯಾಧೀಶರಿಂದ ಆ.25 ರಂದು ಸರ್ಚ್ ವಾರಂಟ್ ಪಡೆದುಕೊಂಡು ದೂರುದಾರ ಚಿನ್ನಯ್ಯನನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ.
ಬುರುಡೆ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ಉಜಿರೆಯ ನಿವಾಸದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಕಳೆದ ಎರಡು ತಿಂಗಳಿಂದ ಆಶ್ರಯ ನೀಡಿದ್ದರಿಂದ ಚಿನ್ನಯ್ಯನಿಗೆ ಸಂಬಂಧಿಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲು ಈ ದಾಳಿ ನಡೆಯುತ್ತಿದೆ ಎನ್ನಲಾಗಿದೆ.
