Monday, August 4, 2025
!-- afp header code starts here -->
Homebig breakingMUDA ಸಂಕಷ್ಟದಲ್ಲಿರುವ ಸಿದ್ದರಾಮಯ್ಯಗೆ ಸ್ವಾಮೀಜಿಗಳ ಅಭಯ - ನಿಮ್ಮೊಂದಿಗೆ ನಾವಿದ್ದೇವೆ ಎಂದ ಮಠಾಧೀಶರು..!

MUDA ಸಂಕಷ್ಟದಲ್ಲಿರುವ ಸಿದ್ದರಾಮಯ್ಯಗೆ ಸ್ವಾಮೀಜಿಗಳ ಅಭಯ – ನಿಮ್ಮೊಂದಿಗೆ ನಾವಿದ್ದೇವೆ ಎಂದ ಮಠಾಧೀಶರು..!

ಬೆಂಗಳೂರು : ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ ಬೆನ್ನಲ್ಲೇ ಅವರ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸುತ್ತಿದೆ. ಇದಕ್ಕೆ ಪ್ರತಿಯಾಗಿ ಕೈ ನಾಯಕರು ನಾವೆಲ್ಲ ನಿಮ್ಮೊಂದಿಗಿದ್ದೇವೆಂದು ಹೇಳಿ ಸಿಎಂ ಬೆನ್ನಿಗೆ ನಿಂತಿದ್ದಾರೆ. ಈಗ ಸ್ವಾಮೀಜಿಗಳ ಸರದಿ… ಹಿಂದುಳಿದ ವರ್ಗ, ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ ಒಕ್ಕೂಟ ಸಿದ್ದರಾಮಯ್ಯಗೆ ನೈತಿಕ ಬೆಂಬಲ ಘೋಷಿಸಿದೆ.
ವಿವಿಧ ಮಠಾಧೀಶರು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ತಮ್ಮ ಬೇಷರತ್ ನೈತಿಕ ಬೆಂಬಲ ಘೋಷಿಸಿದರು. ಸರ್ಕಾರವನ್ನು ಅಸ್ಥಿರಗೊಳಿಸುವ ಕೇಂದ್ರ ಸರ್ಕಾರದ ಮತ್ತು ರಾಜಭವನದ ಷಡ್ಯಂತ್ರಗಳನ್ನು ತೀವ್ರವಾಗಿ ಖಂಡಿಸಿದ ಸ್ವಾಮೀಜಿಗಳು ಈ ಷಡ್ಯಂತ್ರದ ವಿರುದ್ಧ ಒಕ್ಕೊರಲಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ನಿಂತು ಹೋರಾಟ ನಡೆಸುವುದಾಗಿ ಪ್ರಕಟಿಸಿದರು.

ನಿಯೋಗದಲ್ಲಿದ್ದ ಸ್ವಾಮೀಜಿಗಳ ವಿವರ ಇಲ್ಲಿದೆ

ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಜಿಯವರು ಕನಕ ಪೀಠ ಕಾಗಿನೆಲೆ
ಜಗದ್ಗುರು ಶ್ರೀ ಶಾಂತವೀರ ಮಹಾಸ್ವಾಮಿಗಳು ಶ್ರೀ ಜಗದ್ಗುರು ಕುಂಚಿಟಿಗ ಮಾಸಂಸ್ಥಾನ ಮಠ ಹೊಸದುರ್ಗ
ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮಿಗಳು ಭೋವಿ ಗುರುಪೀಠ ಚಿತ್ರದುರ್ಗ
ಜಗದ್ಗುರು ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಮಹಾಸ್ವಾಮಿಗಳು ಮಾದರ ಚನ್ನಯ ಗುರುಪೀಠ ಚಿತ್ರದುರ್ಗ
ಜಗದ್ಗುರು ಶ್ರೀ ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು ಭಗಿರಥ ಪೀಠ ಮಧುರೆ
ಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಗಳು ಕನಕ ಗುರುಪೀಠ ಹೊಸದುರ್ಗ
ಶ್ರೀ ರೇಣುಕಾನಂದ ಸ್ವಾಮಿಗಳು ನಾರಾಯಣ ಗುರುಪೀಠ ಶಿವಮೊಗ್ಗ
ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳು ಮಡಿವಾಳ ಗುರುಪೀಠ ಚಿತ್ರದುರ್ಗ
ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮಿಗಳು ಹಡಪದ ಅಪ್ಪಣ್ಣ ಗುರುಪೀಠ ತಂಗಡಗಿ
ಶ್ರೀ ಶಾಂತಮ್ಮಯ್ಯ ಸ್ವಾಮೀಜಿಗಳು ಸರೂರು ವಿಜಯನಗರ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!