ಶಿವಮೊಗ್ಗ : ನಿವೃತ್ತಿಯಾದ ಸಿಬ್ಬಂದಿಯೊಬ್ಬರನ್ನು ತಹಸೀಲ್ದಾರ್ ತಮ್ಮ ಜೀಪ್‌ನಲ್ಲಿ ಕೂರಿಸಿಕೊಂಡು ಮನೆಗೆ ಬಿಟ್ಟು ಬಂದು ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಿದ ಪ್ರಸಂಗ ಹೊಸನಗರದಲ್ಲಿ ನಡೆದಿದೆ.
ಹೊಸನಗರ ಗ್ರಾಮ ಆಡಳಿತಾಧಿಕಾರಿಯಾಗಿದ್ದ ಸದಾಶಿವ ಸೇವೆಯಿಂದ ನಿವೃತ್ತಿಯಾದ ಅಧಿಕಾರಿ. ಈ ಹಿನ್ನೆಲೆಯಲ್ಲಿ ಹೊಸನಗರ ತಹಸೀಲ್ದಾರ್ ರಶ್ಮಿ ಹಾಲೇಶ್ ತಮ್ಮ ಜೀಪ್‌ನಲ್ಲಿ ಕೂರಿಸಿಕೊಂಡು ತಾವೇ ವಾಹನ ಚಾಲನೆ ಮಾಡಿಕೊಂಡು ಮನೆಗೆ ಬಿಟ್ಟು ಬಂದಿದ್ದಾರೆ.
ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಸದಾಶಿವ ವಯೋನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಇಲಾಖೆ ವತಿಯಿಂದ ಬೀಳ್ಕೊಡಲಾಯಿತು. ತಹಸೀಲ್ದಾರ್ ರಶ್ಮಿ ಹಾಲೇಶ್ ತಮ್ಮ ಸಿಬ್ಬಂದಿಯನ್ನು ಬೀಳ್ಕೊಟ್ಟ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ.




