Thursday, May 14, 2026
Homebig breakingಯಾಣದ ಹಸೆಮನೆ ನುಜ್ಜಗಿ ಕ್ರಾಸ್ ಬಳಿ ಪ್ರವಾಸಿ ಬಸ್ ಪಲ್ಟಿ: 19 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಯಾಣದ ಹಸೆಮನೆ ನುಜ್ಜಗಿ ಕ್ರಾಸ್ ಬಳಿ ಪ್ರವಾಸಿ ಬಸ್ ಪಲ್ಟಿ: 19 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಯಾಣ/ಕುಮಟಾ: ಪ್ರವಾಸಿ ತಾಣ ಯಾಣಕ್ಕೆ ತೆರಳುತ್ತಿದ್ದ ದಾವಣಗೆರೆಯ ಕಾಲೇಜು ವಿದ್ಯಾರ್ಥಿಗಳಿದ್ದ ಬಸ್, ತಾಲೂಕಿನ ಹಸೆಮನೆ ನುಜ್ಜಗಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 19 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.

​ದಾವಣಗೆರೆಯ ಜೈನ್ ಪಿಯು ಕಾಲೇಜಿನಿಂದ ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ಈ ಬಸ್‌ನಲ್ಲಿ ಒಟ್ಟು 52 ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರಯಾಣಿಸುತ್ತಿದ್ದರು. ಮಂಗಳವಾರ ಬೆಳಿಗ್ಗೆ ಶಿರಸಿಯ ಮಾರಿಕಾಂಬಾ ದೇವಸ್ಥಾನದ ದರ್ಶನ ಪಡೆದು ಯಾಣದತ್ತ ತೆರಳುತ್ತಿದ್ದಾಗ, ಹಸೆಮನೆ ನುಜ್ಜಗಿ ಕ್ರಾಸ್‌ನ ಕಡಿದಾದ ತಿರುವಿನಲ್ಲಿ ಈ ಅವಘಡ ಸಂಭವಿಸಿದೆ.

​ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಗೆ ಉರುಳಿದೆ. ಘಟನೆಯ ತೀವ್ರತೆಗೆ ಬಸ್‌ನಲ್ಲಿದ್ದ 19 ವಿದ್ಯಾರ್ಥಿಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಉಳಿದ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

​ಅಪಘಾತ ಸಂಭವಿಸುತ್ತಿದ್ದಂತೆ ಚೀರಾಟ ಕೇಳಿ ಸ್ಥಳೀಯರು ಹಾಗೂ ದಾರಿಹೋಕರು ರಕ್ಷಣೆಗೆ ಧಾವಿಸಿದ್ದು, ಗಾಯಾಳುಗಳನ್ನು ಬಸ್‌ನಿಂದ ಹೊರತೆಗೆದು ತಕ್ಷಣವೇ ಸಮೀಪದ ಆಸ್ಪತ್ರೆಗೆ ರವಾನಿಸಿದ್ದಾರೆ. ಗಂಭೀರ ಗಾಯಗೊಂಡ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಮುಂದುವರೆದಿದೆ.

​ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರವಾಸದ ಸಂಭ್ರಮದಲ್ಲಿದ್ದ ವಿದ್ಯಾರ್ಥಿಗಳ ತಂಡದಲ್ಲಿ ಈ ಆಕಸ್ಮಿಕ ಘಟನೆಯಿಂದಾಗಿ ಆತಂಕ ಮನೆಮಾಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!