Friday, March 27, 2026
Homebig breakingವಿಶಾಲ್‌ ಆರೋಗ್ಯದಲ್ಲಿ ಮತ್ತೆ ಏರುಪೇರು - ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾದ ತಮಿಳು ನಟ..!

ವಿಶಾಲ್‌ ಆರೋಗ್ಯದಲ್ಲಿ ಮತ್ತೆ ಏರುಪೇರು – ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾದ ತಮಿಳು ನಟ..!

ಚೆನ್ನೈ : ತಮಿಳು ನಟ ವಿಶಾಲ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಕೆಲವು ದಿನದ ಹಿಂದೆ ಮದಗಜರಾಜ ಚಿತ್ರದ ಪ್ರಮೋಷನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಅವರು ಮಾತನಾಡುವ ಕೈ ನಡುಗುತ್ತಿತ್ತು, ಮಾತನಾಡುವಾಗ ತೊದಲುತ್ತಿದ್ದರು. ಇದನ್ನ ಕಂಡ ಅಭಿಮಾನಿಗಳು ಆತಂಕಗೊಂಡಿದ್ದರು. ವೈರಲ್‌ ಫೀವರ್‌ನಿಂದ ಈ ರೀತಿ ಸಮಸ್ಯೆಯಾಗಿದೆ ಅಂತ ಅವರು ಹೇಳಿಕೊಂಡಿದ್ದರು.

ಇದೀಗ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದರಿಂದ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ. ಅತಿಯಾದ ಜ್ವರ ಮತ್ತು ನಿಶ್ಯಕ್ತಿಯಿಂದ ಬಳಲುತ್ತಿದ್ದ ಅವರನ್ನು ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪೋಲೋ ಆಸ್ಪತ್ರೆ ಆಡಳಿತ ಮಂಡಳಿ ಕೂಡ ನಟ ವಿಶಾಲ್ ಆರೋಗ್ಯದ ಕುರಿತು ಹೇಳಿಕೆ ಬಿಡುಗಡೆ ಮಾಡಿದ್ದು, ವಿಶಾಲ್ ವೈರಲ್ ಜ್ವರದಿಂದ ಬಳಲುತ್ತಿದ್ದಾರೆ ಮತ್ತು ಕೆಲವು ದಿನಗಳವರೆಗೆ ಸಂಪೂರ್ಣ ಬೆಡ್ ರೆಸ್ಟ್ ಅಗತ್ಯವಿದೆ ಎಂದು ದೃಢಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!