ಮೈಸೂರು : ಉದಯಗಿರಿ ಪೊಲೀಸ್ ಠಾಣೆಗೆ ಕಲ್ಲು ತೂರಾಟ ಸಂಬಂಧ ಪೊಲೀಸರ ಮೇಲೆ ಹಲ್ಲೆ ಸಹಿಸಲ್ಲ. ಕ್ರಮಕ್ಕೆ ಈಗಾಗಲೇ ಸೂಚನೆ ನೀಡಿದ್ದೇವೆ. ಯಾರೇ ತಪ್ಪು ಮಾಡಿದರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಮೈಸೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಪೊಲೀಸರು ಸಮಯ ಪ್ರಜ್ಞೆ ಮೆರೆದಿದ್ದು, ಬೇಗನೆ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ನಾನು ಕೂಡ ವಿಡಿಯೋ ನೋಡಿದ್ದೇನೆ. ಘಟನೆ ಬಗ್ಗೆ ಮಾಹಿತಿ ಪಡೆದಿದ್ದೇನೆ. ಎಲ್ಲರೂ ಕೂಡ ಸಣ್ಣ ಹುಡುಗರು ಅಂತ ಹೇಳಿದ್ದಾರೆ. ಕಲ್ಲು ಎಸೆದಿರುವವರೆಲ್ಲರೂ ಮುಸ್ಲೀಮರು, 14, 15ನೇ ವಯಸ್ಸಿನವರು. ಮುಖಂಡರ ಮಾತನ್ನೂ ಅವರು ಕೇಳಿಲ್ಲ. ಹಿರಿಯರು ಮುಖಂಡರು ಸೇರಿ ಗಲಭೆ ಕಂಟ್ರೋಲ್ ಮಾಡಿದ್ದಾರೆ. ಪೊಲೀಸರಿಗೆ ರಕ್ಷಣೆ ಇತ್ತು. ಆದರೆ ಅಲ್ಲಿನ ಜನರಿಗೆ ರಕ್ಷಣೆ ಇರಲಿಲ್ಲ. ಗಲಾಟೆ ಮಾಡಿದವರನ್ನ ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ ಪೊಲೀಸರು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತಾರೆ ಎಂದರು.
ಉದಯಗಿರಿ ಗಲಭೆ ಪ್ರಕರಣ – ನಿರ್ದಾಕ್ಷಿಣ್ಯ ಕ್ರಮದ ಭರವಸೆ ನೀಡಿದ ಡಿಸಿಎಂ ಡಿಕೆಶಿ..!
RELATED ARTICLES