Friday, October 16, 2026
Homeಕ್ರೈಮ್ಕಾರ್ಮಿಕರ ಮೇಲೆ ಅಮಾನುಷ ಹಲ್ಲೆ - ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು..!

ಕಾರ್ಮಿಕರ ಮೇಲೆ ಅಮಾನುಷ ಹಲ್ಲೆ – ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು..!

Telegram Group
Join Now

ವಿಜಯಪುರ : ಮುಂಗಡ ಹಣ ಪಡೆದು ಕೆಲಸಕ್ಕೆ ಬರಲು ವಿಳಂಬ ಮಾಡಿದ್ದಕ್ಕೆ ಮೂವರು ಕಾರ್ಮಿಕರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಇಟ್ಟಿಗೆ ಕಾರ್ಖಾನೆ ಮಾಲೀಕ ಖೇಮು ರಾಠೋಡ್, ವಿಶಾಲ ಜುಮನಾಳ ಹಾಗೂ ಮಾನವರ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಪರಾರಿಯಾದ ಇಬ್ಬರಿಗಾಗಿ ಶೋಧ ನಡೆಸಿದ್ದಾರೆ.
ಘಟನೆ ಬಗ್ಗೆ ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ರು. ಜನವರಿ 18ರಂದು ಮಾಲೀಕ ಖೇಮು ರಾಥೋಡ್ ಮತ್ತು ಸಹಚರರಿಂದ ಹಲ್ಲೆ ನಡೆದಿದೆ. ಮುಂಗಡ ಹಣ, ಕೆಲಸ ಮಾಡುವ ವಿಚಾರವಾಗಿ ಹಲ್ಲೆಯಾಗಿದೆ ಎಂದರು. ಪರಾರಿಯಾಗಿರುವ ಇಬ್ಬರು ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ. ಕಾರ್ಮಿಕರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಾನೂನು ಪ್ರಕಾರ ಕ್ರಮಕೈಗೊಳ್ಳಲಾಗುವುದು. ಹಲ್ಲೆಗೊಳಗಾದ ಕಾರ್ಮಿಕರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಕರಣ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ಖಂಡನೆ ವ್ಯಕ್ತಪಡಿಸಿದ್ದು, ಹಲ್ಲೆ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಯಾರೇ ತಪ್ಪು ಮಾಡಿದರೂ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!