Monday, August 4, 2025
!-- afp header code starts here -->
Homebig breakingಗಣರಾಜ್ಯೋತ್ಸವಕ್ಕೂ ಮುನ್ನವೇ ಉಗ್ರರ ಅಟ್ಟಹಾಸ - ಸೇನಾ ಶಿಬಿರದ ಮೇಲೆ ಭಯೋತ್ಪಾದಕರ ದಾಳಿ..!

ಗಣರಾಜ್ಯೋತ್ಸವಕ್ಕೂ ಮುನ್ನವೇ ಉಗ್ರರ ಅಟ್ಟಹಾಸ – ಸೇನಾ ಶಿಬಿರದ ಮೇಲೆ ಭಯೋತ್ಪಾದಕರ ದಾಳಿ..!

ಜಮ್ಮು ಕಾಶ್ಮೀರ : ಭಾರತ ದೇಶ ಗಣರಾಜ್ಯೋತ್ಸವ ಸಂಭ್ರಮದಲ್ಲಿದೆ. ನಾಳೆ ದೇಶಾದ್ಯಂತ ಗಣತಂತ್ರ ದಿನಾಚರಣೆ ಮಾಡಲಾಗುತ್ತಿದೆ. ಇದಕ್ಕೂ ಮುನ್ನಾ ದಿನ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಜಮ್ಮುವಿನ ಸೇನಾ ಶಿಬಿರದ ಮೇಲೆ ದಾಳಿ ನಡೆಸುವ ಮೂಲಕ ಉಗ್ರರು ದಾಳಿ ಮಾಡಿದ್ದಾರೆ. ದಾಳಿಯಲ್ಲಿ ಕೆಲವು ಯೋಧರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ಕಥುವಾ ಜಿಲ್ಲೆಯ ಬಿಲ್ಲವರ್‌ನ ಭತೋಡಿ ಗ್ರಾಮದಲ್ಲಿ ಸೇನಾ ಶಿಬಿರದ ಮೇಲೆ ದಾಳಿಯಾಗಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಹೈ ಅಲರ್ಟ್‌ ಕ್ರಮ ಕೈಗೊಳ್ಳಲಾಗಿದೆ. ದಾಳಿಗೆ ಪ್ರತಿಯಾಗಿ ಎಚ್ಚೆತ್ತ ಯೋಧರು ಪ್ರತಿದಾಳಿ ನಡೆಸಿದ್ದಾರೆ. ಯೋಧರು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ತಿಳಿದು ಬಂದಿದೆ.
ಗಣರಾಜ್ಯೋತ್ಸವ ಸಂದರ್ಭದಲ್ಲಿ ದಾಳಿ ನಡೆಸೋದಕ್ಕೆ ಉಗ್ರರು ಹೊಂಚು ಹಾಕಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಜಮ್ಮು ಸೇರಿದಂತೆ ಉತ್ತರ ಭಾರತದಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಜಮ್ಮುವಿನ ರಾಜಧಾನಿ ಶ್ರೀನಗರದ ಸ್ಟೇಡಿಯಂನಲ್ಲಿ ಜನವರಿ 26 ರಂದು ಗಣರಾಜ್ಯೋತ್ಸವ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ನಡುವೆ ಭಯ ಹುಟ್ಟಿಸುವ ನಿಟ್ಟಿನಲ್ಲಿ ಈ ದಾಳಿಯಾಗಿದೆ.
ಇದೀಗ ಸ್ಟೇಡಿಯಂ ವ್ಯಾಪ್ತಿಯಲ್ಲಿ ಹದ್ದಿನ ಕಣ್ಣಿಡಲಾಗಿದೆ. ಹೆಚ್ಚಿನ ಸೇನಾಪಡೆ, ಸ್ಥಳೀಯ ಪೊಲೀಸರನ್ನು ನಿಯೋಜಿಸಿ ಭದ್ರತೆ ಟೈಟ್‌ ಮಾಡಲಾಗಿದೆ ಎಂದು ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!