Friday, March 27, 2026
Homebig breakingICC ಚಾಂಪಿಯನ್ಸ್‌ ಟ್ರೋಫಿ - ಪಾಕಿಸ್ತಾನಕ್ಕೆ ತೆರಳುತ್ತಿಲ್ಲ ರೋಹಿತ್‌ ಶರ್ಮಾ - ಭಾರತ ಸರ್ಕಾರ ಸ್ಪಷ್ಟನೆ..!

ICC ಚಾಂಪಿಯನ್ಸ್‌ ಟ್ರೋಫಿ – ಪಾಕಿಸ್ತಾನಕ್ಕೆ ತೆರಳುತ್ತಿಲ್ಲ ರೋಹಿತ್‌ ಶರ್ಮಾ – ಭಾರತ ಸರ್ಕಾರ ಸ್ಪಷ್ಟನೆ..!

ದೆಹಲಿ : ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಪಂದ್ಯಾವಳಿಯ ಆತಿಥ್ಯವನ್ನು ಈ ಬಾರಿ ಪಾಕಿಸ್ತಾನ ವಹಿಸಿಕೊಂಡಿದೆ. ಫೆಬ್ರವರಿ ೧೯ರಿಂದ ಪ್ರತಿಷ್ಠಿತ ಟೂರ್ನಮೆಂಟ್‌ ನಡೆಯಲಿದೆ.
ಟೂರ್ನಿಯ ಉದ್ಘಾಟನಾ ಸಮಾರಂಭದಲ್ಲಿ ಎಲ್ಲಾ ತಂಡಗಳ ನಾಯಕರು ಪಾಲ್ಗೊಳ್ಳುವುದು ವಾಡಿಗೆ. ಆದರೆ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಹೇಗಿದೆ ಅನ್ನೋದು ಗೊತ್ತಿರುವ ವಿಚಾರ. ಹೀಗಾಗಿ ಈ ಕಾರ್ಯಕ್ರಮದಲ್ಲಿ ಭಾರತದ ತಂಡ ಪಾಲ್ಗೊಳ್ಳುತ್ತಾ ಅನ್ನುವ ಪ್ರಶ್ನೆ ಇತ್ತು. ಇದೀಗ ಅದಕ್ಕೆ ಉತ್ತರ ಸಿಕ್ಕಿದೆ.
ಭಾರತ ತಂಡದ ನಾಯಕನನ್ನು ಉದ್ಘಾಟನಾ ಸಮಾರಂಭಕ್ಕೆ ಕಳುಹಿಸಿಕೊಡುವಂತೆ ಪಾಕಿಸ್ತಾನ ಮನವಿ ಮಾಡಿತ್ತು. ಆದರೆ ಕಾರ್ಯಕ್ರಮದಲ್ಲಿ ಭಾರತ ಕ್ರಿಕೆಟ್‌ ತಂಡದ ನಾಯಕ ರೋಹಿತ್‌ ಶರ್ಮಾ ಪಾಲ್ಗೊಳ್ಳುವುದಿಲ್ಲ ಅಂತ ಭಾರತ ಸರ್ಕಾರ ಸ್ಪಷ್ಟಪಡಿಸಿದೆ.
ಪಾಕಿಸ್ತಾನದಲ್ಲಿ ನಡೆಯುವ ಟೂರ್ನಿಗಳಲ್ಲಿ ಪಾಲ್ಗೊಳ್ಳದೆ ಅದೆಷ್ಟೋ ವರ್ಷಗಳು ಕಳೆದಿವೆ. ಈ ಬಾರಿಯ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಕೂಡಾ ಭಾರತದ ಪಂದ್ಯಗಳು ದುಬೈನಲ್ಲಿ ಆಯೋಜನೆಗೊಂಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!