ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿನ ಗೊಂದಲದ ಬಗ್ಗೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಅಸಮಾಧಾನ ಹೊರಹಾಕಿದ್ದಾರೆ. ನಮ್ಮಲ್ಲಿ ತಳಮಟ್ಟದಲ್ಲಿ ಎಲ್ಲವೂ ಸರಿಯಾಗಿದೆ. ಆದರೆ ಪ್ರಥಮ ಸ್ತರದ ನಾಯರಲ್ಲಿ ಭಿನ್ನಾಭಿಪ್ರಾಯವಿದೆ. ಆದಷ್ಟು ಬೇಗ ಎಲ್ಲವೂ ಸರಿಯಾಗುತ್ತದೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.
ಮಾಧ್ಯಮ ಸಂಸ್ಥೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಅವರು, ಸರಿಯಲ್ಲ. ಇತ್ತೀಚಿನ ಬೆಳವಣಿಗೆ ಕಾರ್ಯಕರ್ತರಿಗೆ ಬಹಳ ನೋವುಂಟುಮಾಡಿದೆ. ಪಕ್ಷದಲ್ಲಿನ ಭಿನ್ನಮತ ಒಬ್ಬ ವ್ಯಕ್ತಿಯಿಂದ ಆಗುವಂತಹದ್ದಲ್ಲ. ಇಡೀ ಸಮೂಹ ಈ ವಿಚಾರದಲ್ಲಿ ಯೋಚನೆ ಮಾಡಬೇಕು. ನಮ್ಮ ವಿರೋಧಿಗಳು ನಮ್ಮನ್ನ ನೋಡಿಕೊಂಡು ಆಡಿಕೊಳ್ಳುವ ರೀತಿ ಆಗಬಾರದು. ಪಕ್ಷಕ್ಕಾಗಿ ಎಲ್ಲರೂ ಒಟ್ಟಾಗಿ ದುಡಿಯಬೇಕು ಅಂತ ಇಂಗಿತ ವ್ಯಕ್ತಪಡಿಸಿದ್ದಾರೆ.
ಕೆಲವರಿಂದಾಗಿ ಈ ರೀತಿಯ ಪರಿಸ್ಥಿತಿ ನಿರ್ಮಾಣವಾಗಿದೆ. ನಾಲ್ಕೈದು ಜನರಿಂದಾದ ಸಮಸ್ಯೆಯನ್ನ ಪಕ್ಷಕ್ಕೆ ಕಟ್ಟುವುದು ಸರಿಯಲ್ಲ. ನಾಯಕರಲ್ಲಿ ವಿಶ್ವಾಸದ ಕೊರತೆ ಇದೆ. ಯಾರು ಅಸಮಾಧಾನಿತರಿದ್ದಾರೋ ಅವರು ಕೂತು ಮಾತನಾಡಿದರೆ ಎಲ್ಲವೂ ಬಗೆಹರಿಯುತ್ತದೆ. ನಾಯಕತ್ವವನ್ನು ಒಪ್ಪಿಕೊಳ್ಳುವ ಮನಸ್ಥಿತಿ ಎಲ್ಲರಲ್ಲೂ ಬರಬೇಕು. ಆ ರೀತಿ ಆದ್ರೆ ಯಾವುದೇ ಸಮಸ್ಯೆ ಇರುವುದಿಲ್ಲ ಅಂತ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
