Monday, August 4, 2025
!-- afp header code starts here -->
Homebig breakingರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಂಪನಿಗಳ ಹಾವಳಿಗೆ ಬೀಳುತ್ತಾ ಬ್ರೇಕ್? - ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ...

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಂಪನಿಗಳ ಹಾವಳಿಗೆ ಬೀಳುತ್ತಾ ಬ್ರೇಕ್? – ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿಯಿಂದ ಜನ ಕಂಗಾಲಾಗುತ್ತಿರುವ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆದಿದೆ.
ಕಂಪನಿಗಳ ಅಟ್ಟಹಾಸದಿಂದ ಹಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೂ ಅನೇಕ ಪ್ರಕರಣದಲ್ಲಿ ಜನರ ಆಸ್ತಿಯನ್ನು ಸಂಸ್ಥೆಗಳು ಮುಟ್ಟುಗೋಲು ಹಾಕಿಕೊಳ್ಳುತ್ತಿವೆ. ಹೀಗಾಗಿ ಇದಕ್ಕೆ ಬ್ರೇಕ್‌ ಹಾಕಬೇಕೆಂಬ ಆಗ್ರಹ ಹೆಚ್ಚಾಗಿತ್ತು. ಇದರ ಬೆನ್ನಲ್ಲೇ ನಡೆಯುತ್ತಿರುವ ಸಭೆ ಮಹತ್ವ ಪಡೆದುಕೊಂಡಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ಕಾನೂನು ಸಚಿವ ಎಚ್.ಕೆ.ಪಾಟೀಲ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಎಸಿಎಸ್ ಅತೀಕ್ ಅಹಮದ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಸೇರಿ ಗೃಹ ಇಲಾಖೆ, ಒಳಾಡಳಿತ, ಕಂದಾಯ, ಗುಪ್ತಚರ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದಾರೆ.

ಮೈಕ್ರೋ ಫೈನಾನ್ಸ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯ ಮುಂದಿಟ್ಟ ಖಾರವಾದ ಪ್ರಶ್ನೆಗಳು…

ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ಸಾಲ ವಸೂಲಿಗೆ ಇಳಿಯುತ್ತಿರುವುದನ್ನು ನಿಯಂತ್ರಿಸಲು ಏನು ಮಾಡಿದ್ದೀರಿ? ಅಂಥಾ ಸಿಬ್ಬಂದಿ ವಿರುದ್ಧ ನಿಮ್ಮ ಸಂಸ್ಥೆಗಳಿಂದ ಏನು ಕ್ರಮ ಕೈಗೊಂಡಿದ್ದೀರಿ: ನೋಂದಣಿ ಆಗಿ ಪರವಾನಗಿ ಪಡೆದಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರನ್ನು ಖಾರವಾಗಿ ಪ್ರಶ್ನಿಸಿದ ಸಿ.ಎಂ ಸಿದ್ದರಾಮಯ್ಯ.

*ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ?

*ಕಾನೂನು ಕೈಗೆತ್ತಿಕೊಳ್ಳಲು ನಿಮ್ಮ ಸಿಬ್ಬಂದಿಗೆ ಅನುಮತಿ ಕೊಟ್ಟವರು ಯಾರು?

*ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತಿದ್ದೀರಾ ?

*ರಿಸರ್ವ್ ಬ್ಯಾಂಕಿನ ಷರತ್ತು ಮತ್ತು ನಿಬಂಧನೆಗಳನ್ನು ಸಾಲಗಾರರಿಗೆ ಅವರ ಆಡು ಭಾಷೆಯಲ್ಲಿ ಅರ್ಥ ಮಾಡಿಸಿದ್ದೀರಾ?

*RBI ನಿಯಮ ಮೀರಿ ಸಾಲ ಕೊಡುತ್ತಿದ್ದೀರಾ ? ಮರುಪಾವತಿಯ ಕೆಪಾಸಿಟಿ ಗಮನಿಸದೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುತ್ತಿರುವುದು ಏಕೆ?

*ಸಾಲಗಾರರಿಗೆ ಸಾಲ ಕೊಡುವ ಮೊದಲು ಆಧಾರ್ KYC ಮಾಡಿಸುತ್ತಿಲ್ಲ ಏಕೆ ? ಇದನ್ನು ಮಾಡಿಸಿದ್ದರೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುವುದು ತಪ್ಪುತ್ತಿತ್ತು

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!