ಬೆಂಗಳೂರು : 2022ರಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ಳಾರೆಯಲ್ಲಿ ನಡೆದಿದ್ದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಪಿಎಫ್ಐ ಸದಸ್ಯನಾಗಿದ್ದ ಅತೀಕ್ ಅಹ್ಮದ್ ಬಂಧಿತ ಆರೋಪಿ. ಈ ಪ್ರಕರಣದಲ್ಲಿ ಈವರೆಗೆ ಬಂಧಿಸಲ್ಪಟ್ಟ 21ನೇ ಆರೋಪಿಯಾಗಿದ್ದಾನೆ ಈತ.
ಪ್ರವೀಣ್ ಕೊಲೆ ಬಳಿಕ ಪ್ರಮುಖ ಆರೋಪಿಯಾಗಿದ್ದ ಮುಸ್ತಫಾ ಎಂಬಾತನಿಗೆ ಅತೀಕ್ ಆಶ್ರಯ ನೀಡಿದ್ದ ಎನ್ನಲಾಗಿದೆ. ಕೊಲೆಗೆ ಸಂಚು ರೂಪಿಸಿದ್ದ ಮುಸ್ತಫಾ ಪೈಚಾರ್ನನ್ನು ಮೇ 2024ರಲ್ಲಿ ಎನ್ಐಎ ಬಂಧಿಸಿತ್ತು.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಇನ್ನೂ 6 ಮುಖ್ಯ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಇವರ ಪತ್ತೆಗೆ ಎನ್ಐಎ ತಂಡ ಶೋಧ ನಡೆಸುತ್ತಿದ್ದು, ಸುಳಿವು ನೀಡಿದವರಿಗೆ ಸೂಕ್ತ ಬಹುಮಾನ ಘೋಷಿಸಿದೆ.
2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಪಿಎಫ್ಐ ಕಾರ್ಯಕರ್ತರು ಮತ್ತು ಸದಸ್ಯರು ಹತ್ಯೆ ಮಾಡಿದ್ದರು. ಪ್ರಕರಣದ ಗಂಭೀರತೆ ಅರಿತ ಎನ್ಐಎ ಆಗಸ್ಟ್ 4ರಂದು ತನಿಖೆಯನ್ನ ಕೈಗೆತ್ತಿಕೊಂಡಿತ್ತು.
ಹಿಂದು ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ – ಮತ್ತೋರ್ವ ಆರೋಪಿ ಬಂಧನ..!
RELATED ARTICLES
