Sunday, June 28, 2026
Homeಸಿನೆಮಾಬ್ಯಾಂಗಲ್ ಬಂಗಾರಿ ಹಾಡಿಗೆ ಭರ್ಜರಿ ರೆಸ್ಪಾನ್ಸ್: ಯುವ ಡ್ಯಾನ್ಸ್‌ ಗೆ ಫ್ಯಾನ್ಸ್‌ ಫಿದಾ!

ಬ್ಯಾಂಗಲ್ ಬಂಗಾರಿ ಹಾಡಿಗೆ ಭರ್ಜರಿ ರೆಸ್ಪಾನ್ಸ್: ಯುವ ಡ್ಯಾನ್ಸ್‌ ಗೆ ಫ್ಯಾನ್ಸ್‌ ಫಿದಾ!

ಎಕ್ಕ ಸಿನಿಮಾದ ಬ್ಯಾಂಗಲ್ ಬಂಗಾರಿ ಹಾಡಿಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಈ ಗೀತೆ ಎಲ್ಲೆಡೆ ವೈರಲ್ ಆಗಿದ್ದು, ಅನೇಕ ಸೆಲೆಬ್ರಿಟಿಗಳು ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ನಾಯಕ ಯುವರಾಜ್ ಕುಮಾರ್ ಹಾಗೂ ನಾಯಕಿ ಸಂಜನಾ ಆನಂದ್ ಬ್ಯಾಂಗಲ್ ಬಂಗಾರಿ ಅಂತಾ ಕುಣಿದು ಕುಪ್ಪಳಿಸಿದ್ದರು.

ಎಕ್ಕ ಚಿತ್ರಕ್ಕೆ ರೋಹಿತ್ ಪದಕಿ ನಿರ್ದೇಶನ ಮಾಡಿದ್ದಾರೆ. ಚರಣ್ ರಾಜ್ ಸಂಗೀತದ ಮೋಡಿ ಇಡೀ ಚಿತ್ರಕ್ಕಿದೆ. ಅಶ್ವಿನಿ ಪುನೀತ್ ರಾಜ್‌ಕುಮಾರ್, ಜಯಣ್ಣ, ಕಾರ್ತಿಕ್ ಗೌಡ ಒಟ್ಟಿಗೆ ಸೇರಿ ಈ ಚಿತ್ರವನ್ನ ನಿರ್ಮಿಸಿದ್ದಾರೆ.

ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದ ಹಾಡಿಗೆ ಆಂತೋನಿ ದಾಸ್ ಕಂಠ ಕುಣಿಸಿದ್ದರು. ಚರಣ್ ರಾಜ್ ಸಂಗೀತ, ಯುವ-ಸಂಜನಾ ಕುಣಿದ ಬಂಗಾಲ್ ಬಂಗಾರಿ ಗೀತೆ ಸಖತ್ ಹಿಟ್ ಕಂಡಿದೆ.

ಕೇವಲ 22 ದಿನಗಳಲ್ಲಿ ಬರೋಬ್ಬರಿ 10 ಮಿಲಿಯನ್ ವೀಕ್ಷಣೆ ಕಂಡಿರುವ ಹಾಡು, ಟಾಪ್ ಮ್ಯೂಸಿಕ್ ವಿಡಿಯೋ ಕೆಟಗರಿಯಲ್ಲಿ 29ನೇ ಸ್ಥಾನ ಪಡೆದಿದೆ. ಅತಿ ಕಡಿಮೆ ಸಮಯದಲ್ಲಿ ಬ್ಯಾಂಗಲ್ ಬಂಗಾರಿ ದಾಖಲೆ ಬರೆದಿದ್ದು, ಚಿತ್ರತಂಡದ ಖುಷಿಗೆ ಕಾರಣವಾಗಿದೆ.‌ 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments