Monday, June 29, 2026
HomeಸಿನೆಮಾNS Shankar: ‘ಉಲ್ಟಾ ಪಲ್ಟಾ’ ಚಿತ್ರದ ನಿರ್ದೇಶಕ ಎನ್​ಎಸ್ ಶಂಕರ್ ಹೃದಯಾಘಾತದಿಂದ ನಿಧನ

NS Shankar: ‘ಉಲ್ಟಾ ಪಲ್ಟಾ’ ಚಿತ್ರದ ನಿರ್ದೇಶಕ ಎನ್​ಎಸ್ ಶಂಕರ್ ಹೃದಯಾಘಾತದಿಂದ ನಿಧನ

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಎನ್​ಎಸ್ ಶಂಕರ್  ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ‘ಉಲ್ಟಾ ಪಲ್ಟಾ’ ರೀತಿಯ ಸೂಪರ್ ಹಿಟ್ ಸಿನಿಮಾಗಳಿಗೆ ನಿರ್ದೇಶನ ಮಾಡಿದ ಖ್ಯಾತಿ ಅವರಿಗಿತ್ತು.

ಕಳೆದ ಕೆಲವು ದಿನಗಳಿಂದ ಎನ್​ಎಸ್ ಶಂಕರ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಈಗ ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಮಲಗಿದ್ದಾಗಲೇ ಅವರು ಕೊನೆಯುಸಿರು ಎಳೆದರು ಎನ್ನಲಾಗಿದೆ. ಉತ್ತಮ ಬರಹಗಾರರಾಗಿದ್ದ ಅವರು ಅನೇಕ ಪುಸ್ತಕಗಳನ್ನು ಬರೆದಿದ್ದರು. ಆ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೂ ಕೊಡುಗೆ ನೀಡಿದ್ದರು.

‘ಪ್ರಜಾವಾಣಿ’, ‘ಮುಂಗಾರು’, ‘ಲಂಕೇಶ್ ಪತ್ರಿಕೆ’ ಸೇರಿದಂತೆ ಹಲವು ಮಾಧ್ಯಮದಲ್ಲಿ ಸೇವೆ ಸಲ್ಲಿಸಿದ್ದ ಎನ್.ಎಸ್. ಶಂಕರ್ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments