ವಿಜಯಪುರ : 4 ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ವಿಜಯಪುರದ ನಿಡಗುಂದಿ ತಾಲೂಕಿನ ಬೇನಾಳ ಬಳಿಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ನಡೆದಿದೆ. ಮೊದಲು ಕಾಲುವೆಗೆ ತನ್ನ ನಾಲ್ಕು ಮಕ್ಕಳನ್ನು ಎಸೆದಿದ್ದಾಳೆ. ಬಳಿಕ ತಾನೂ ಹಾರಿದ್ದಾಳೆ. ಇದನ್ನು ನೋಡಿದ ಸ್ಥಳೀಯರು ಆ ಮಹಿಳೆಯನ್ನು ಕಾಪಾಡಿದ್ದಾರೆ. ಆದರೆ ನಾಲ್ಕು ಮಕ್ಕಳನ್ನು ಜೀವಂತ ಕಾಪಾಡಲು ಸಾಧ್ಯವಾಗಲಿಲ್ಲ.
5 ವರ್ಷದ ತನು ಲಿಂಗರಾಜ್ ಭಜಂತಿ, 3 ವರ್ಷದ ರಕ್ಷಾ ಲಿಂಗರಾಜ್ ಭಜಂತ್ರಿ ಹಾಗೂ 13 ತಿಂಗಳ ಅವಳಿ ಮಕ್ಕಳಾದ ಹಸೇನ ಹಾಗೂ ಹುಸೇನ ನೀರಿನಲ್ಲಿ ಮುಳುಗಿ ಪ್ರಾಣ ಚೆಲ್ಲಿದ್ದಾರೆ.
ಈ ಘೋರ ದುರಂತಕ್ಕೆ ಕಾರಣ ಏನು ಅಂತ ಗಮನಿಸೋದಾದ್ರೆ, ಲಿಂಗರಾಜ್ ಭಜಂತ್ರಿ ಕುಟುಂಬದಲ್ಲಿ ಆಸ್ತಿ ವಿಚಾರಕ್ಕೆ ಗಲಾಟೆ ನಡೆದಿತ್ತು. ಇದರಿಂದ ನೊಂದಿದ್ದ ಲಿಂಗರಾಜ್, ಇದೇ ಸಿಟ್ಟಿನಲ್ಲಿ ಪತ್ನಿ ಭಾಗ್ಯಶ್ರೀ ಮೇಲೆ ಕೋಪಗೊಂಡು ಗಲಾಟೆ ಮಾಡುತ್ತಿದ್ದ. ಇದರಿಂದ ಮನನೊಂದಿದ್ದ ಭಾಗ್ಯಶ್ರೀ ಆತ್ಮಹತ್ಯೆ ನಿರ್ಧಾರ ಕೈಗೊಂಡಿದ್ದಾಳೆ ಎನ್ನಲಾಗಿದೆ. ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ ಲಿಂಗರಾಜ್ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದ. ಈ ಸಾಲವನ್ನು ತೀರಿಸಲು ಆಸ್ತಿ ಮಾರಾಟ ಮಾಡಲು ಚಿಂತನೆ ನಡೆಸಿದ್ದ. ಹೀಗಾಗಿ ತನ್ನ ಪಿತ್ರಾರ್ಜಿತ ಆಸ್ತಿ ಪಾಲು ಕೇಳಿದ್ದ. ಆಸ್ತಿ ಪಾಲಿನ ವಿಚಾರವಾಗಿ ನಿಂಗರಾಜ ಸಹೋದರರು ತಂದೆಯ ಜೊತೆ ಜಗಳವಾಡಿದ್ದಾರೆ. ಇದೇ ವಿಚಾರವಾಗಿ ಕಳೆದ ಹಲವಾರು ದಿನಗಳಿಂದ ಮನೆಯಲ್ಲಿ ಜಗಳ ಆಗಿತ್ತಂತೆ. ತಂದೆ ತಾಯಿ ಇರುವರೆಗೂ ಆಸ್ತಿಯಲ್ಲಿ ಪಾಲು ನೀಡಲ್ಲ ಎಂದು ನಿಂಗರಾಜ ಸಹೋದರರು ಜಗಳ ಮಾಡಿದ್ದರು. ಇದರಿಂದ ನಿಂಗರಾಜ ತೀವ್ರವಾಗಿ ನೊಂದಿದ್ದ. ಈ ಕಾರಣಕ್ಕಾಗಿ ಪತ್ನಿ ಭಾಗ್ಯಶ್ರೀ ಹಾಗೂ ಲಿಂಗರಾಜ ಮಧ್ಯೆ ಜಗಳವಾಗುತ್ತಿತ್ತು.
ಬನದ ಹುಣ್ಣಿಮೆ ಹಿನ್ನೆಲೆ ನಿಂಗರಾಜ ತನ್ನ ಪತ್ನಿ ಮಕ್ಕಳೊಂದಿಗೆ ನಿಡಗುಂದಿ ತಾಲೂಕಿನ ಎಲ್ಲಮ್ಮನ ಬೂದಿಹಾಳ ಗ್ರಾಮಕ್ಕೆ ಎಲ್ಲಮ್ಮನ ದರ್ಶನಕ್ಕೆ ತೆರಳುತ್ತಿದ್ದ. ಆಲಮಟ್ಟಿ ಎಡದಂಡೆ ಕಾಲುವೆ ಬಳಿ ನಿಂಗರಾಜನ ಬೈಕ್ ಪೆಟ್ರೋಲ್ ಖಾಲಿಯಾಗಿತ್ತು. ಮಕ್ಕಳು ಹಾಗೂ ಪತ್ನಿಯನ್ನ ಕಾಲುವೆ ಬಳಿ ನಿಲ್ಲಿಸಿ ಪೆಟ್ರೋಲ್ ತರಲು ಹೋಗಿದ್ದ. ವಾಪಸ್ ಬರುವಷ್ಟರಲ್ಲಿ ಭಾಗ್ಯಶ್ರೀ ತನ್ನ ನಾಲ್ಕು ಮಕ್ಕಳನ್ನ ಕಾಲುವೆಗೆ ಎಸೆದು ತಾನೂ ಸಹ ಜಿಗಿದಿದ್ದಳು. ಇದನ್ನು ನೋಡಿದ್ದ ಮೀನುಗಾರರು, ಭಾಗ್ಯಶ್ರೀಯನ್ನು ರಕ್ಷಿಸಿದ್ದರು.
ನಾಲ್ಕು ಮಕ್ಕಳನ್ನು ಕಾಲುವೆಗೆ ಎಸೆದು ಆತ್ಮಹತ್ಯೆಗೆ ಮುಂದಾದ ತಾಯಿ – ವಿಜಯಪುರದಲ್ಲಿ ದಾರುಣ ಘಟನೆ – ಕಾರಣ ಏನು ಗೊತ್ತಾ..?
RELATED ARTICLES
