Monday, February 9, 2026
Homeಕ್ರೈಮ್ಚಿಕ್ಕಮಗಳೂರು: ಗೊಬ್ಬರ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ : ಓರ್ವ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಗೊಬ್ಬರ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ : ಓರ್ವ ಸ್ಥಳದಲ್ಲೇ ಸಾವು

ಮೂಡಿಗೆರೆ: ಗೊಬ್ಬರ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊಕ್ಕಳ್ಳಿ ಬಳಿ ನಡೆದಿದೆ.

ರಸ್ತೆಯ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಟ್ರ್ಯಾಕ್ಟರ್ ನಲ್ಲಿದ್ದ ಸತೀಶ್ (28) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದು, ಟ್ರ್ಯಾಕ್ಟರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಣಕಲ್ ನಿಂದ ಸಾರಗೋಡು ಗ್ರಾಮಕ್ಕೆ 50 ಕ್ಕೂ ಹೆಚ್ಚಿನ ಗೊಬ್ಬರ ಚೀಲ ತುಂಬಿಕೊಂಡು ಟ್ರ್ಯಾಕ್ಟರ್ ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಘಟನೆ ಸಂಬಂಧ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!