Monday, August 10, 2026
Homeಕ್ರೈಮ್ನೇಹಾಳ ಸಾವನ್ನು ರಾಜಕೀಯಕ್ಕೆ ಬಳಸುವುದು ಕೊಲೆಯಷ್ಟೇ ಘೋರ ಅಪರಾಧ; ನಟ ಕಿಶೋರ್

ನೇಹಾಳ ಸಾವನ್ನು ರಾಜಕೀಯಕ್ಕೆ ಬಳಸುವುದು ಕೊಲೆಯಷ್ಟೇ ಘೋರ ಅಪರಾಧ; ನಟ ಕಿಶೋರ್

Telegram Group
Join Now

Actor Kishore reacts to Neha’s murder; ಹುಬ್ಬಳ್ಳಿ ವಿದ್ಯಾನಗರದ ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚು ಕಾವು ಪಡೆದುಕೊಳ್ಳುತ್ತಿದೆ. ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಅಂತ ಕರುನಾಡಿನ ಜನತೆ ಒತ್ತಾಯ ಮಾಡುತ್ತಿದ್ದಾರೆ. ಈ ನಡುವೆ ನಟ ಕಿಶೋರ್‌ ಸಹ ಈ ಕುರಿತು ಧ್ವನಿ ಎತ್ತಿದ್ದಾರೆ.

ನೇಹಾ ಹತ್ಯೆ ಪ್ರಕರಣವನ್ನು ಖಂಡಿಸಿ ನಟ ಕಿಶೋರ್ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಬಾಳಿ ಬದುಕಬೇಕಾದ ಜೀವ ನೇಹಾಗೆ ನಡೆದದ್ದು ನಿಜಕ್ಕೂ ಅಕ್ಷಮ್ಯ ಅಪರಾಧ. ಒಂದು ಪ್ರಗತಿಶೀಲ ಸಮಾಜವಾಗಿ ನಮ್ಮೆಲ್ಲರ ಸೋಲು. ಮಹಿಳೆಯರ ವಿರುದ್ಧ ದಿನೇ ದಿನೇ ಹೆಚ್ಚುತ್ತಿರುವ ಅಪರಾಧಗಳು ಅದರ ಮೂಲ ಕಾರಣಗಳನ್ನು ನಿಯಂತ್ರಿಸಲು ನಾವು & ಸರ್ಕಾರಗಳು ಸಾಧ್ಯ ಕ್ರಮಗಳೆಲ್ಲವನ್ನೂ ಕೈಗೊಳ್ಳಬೇಕು. ಮತ್ತಾರೂ ಇಂಥಹ ಕೃತ್ಯವೆಸಗಲು ಧೈರ್ಯಮಾಡದಂತೆ ಈಗಾಗಲೇ ಸಾಕ್ಷಿ ಸಮೇತ ಬಂಧಿತವಾಗಿರುವ ಅಪರಾಧಿಯ ತನಿಖೆ, ಅತಿ ಕಠಿಣ ಶಿಕ್ಷೆ ಆಗಲೇಬೇಕು.

ದುರಂತ ಎಂದರೆ ಯಾವುದೇ ಶಿಕ್ಷೆ ನೇಹಾಳನ್ನು ತಿರುಗಿ ತರಲಾಗದು. ಆದರೆ ನಮ್ಮ ಕೈಲಿ ಸಾಧ್ಯವಾದದ್ದು ಮತ್ಯಾರೂ ನೇಹಾಳಂತೆ ಬಲಿಯಾಗದಿರುವಂತೆ ನೋಡಿಕೊಳ್ಳುವುದು. ಆದರೆ ಈ ನೋವಿನ ಕ್ಷಣದಲ್ಲೂ ಅದರಲ್ಲಿ ಹಿಂದೂ ಮುಸ್ಲಿಂ ಅಂತ ಮಾತನಾಡುವುದು ಎಷ್ಟು ಸರಿ? ಇಡೀ ಕೋಮಿನ ಮೇಲೆ ಎಪರಾಧ ಹೊರಿಸುವುದು ಎಷ್ಟು ಸರಿ? ದಿನಕ್ಕೆ 78 ಕೊಲೆಗಳಾಗುವ, ಮಹಿಳೆಯರ ವಿರುದ್ಧ ದಿನಕ್ಕೆ 1224 ಅಪರಾಧಗಳಾಗುವ ನಾಡಿನಲ್ಲಿ ಎಷ್ಟು ಹಿಂದೂ? ಎಷ್ಟು ಕ್ರೈಸ್ತ ಅಪರಾಧಿಗಳು? ಹಾಗೆಂದರೆ ಆ ಧರ್ಮದ ನಾವೆಲ್ಲರೂ ಅಪರಾಧಿಗಳೇ? ಹಾಗೆ ನೋಡಿದರೆ ಎಷ್ಟು ಅಂತರ್ಧರ್ಮೀಯ ಜೋಡಿಗಳು ಅನ್ಯೋನ್ಯವಾಗಿ ಬಾಳುತ್ತಿಲ್ಲ? ಅದಕ್ಕೆ ಆ ಧರ್ಮಗಳೂ ಅದರ ಜನರೂ ಜವಾಬ್ದಾರಿಯೇ ? ಹೇಗೆ ?
ಅಪರಾಧಿಗೆ ನ್ಯಾಯ ಕೊಡಿಸಲು ಶ್ರಮಿಸಿವುದನ್ನು ವಿರೋಧ ಪಕ್ಷವಾಗಲೀ ಯಾರಾಗಲೀ ಮಾಡಿದರೆ ಒಪ್ಪಲೇಬೇಕು. ಅದು ಅವರ ಕರ್ತವ್ಯ. ಆದರೆ ಒಡೆದಾಳುವ ಈ ಧರ್ಮಾಂಧ ಜನ ನೇಹಾ ಸಾವನ್ನು ಕೋಮು ಬಣ್ಣ ಬಳಿದು ಜನರಲ್ಲಿ ದ್ವೇಷ ಹೆಚ್ಚಿಸಿ, ರಾಜಕೀಯ ಉದ್ದೇಶಕ್ಕೆ ಬಳಸುವುದು ಕೊಲೆಯಷ್ಟೇ ಘೋರ ಅಪರಾಧ.

ನೇಹಾಳನ್ನು ಹತ್ಯೆ ಮಾಡಿದ ಫಯಾಜ್ ಗೆ ಗಲ್ಲು ಶಿಕ್ಷೆಯಾಗುವಂತೆ ನಾಡಿನಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಆರೋಪಿಯನ್ನು ಬಂಧಿಸಿದ್ದರಷ್ಟೇ. ಆದರೆ ಯಾವುದೇ ಕಠಿಣ ಕ್ರಮದ ಬಗ್ಗೆ ಮಾಹಿತಿ ನೀಡುತ್ತಿಲ್ಲವೆಂದು ಅನೇಕ ಸಂಘಟನೆಗಳು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.

https://www.youtube.com/watch?v=NzgNdMr9nOU

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments