ಮಂಗಳೂರು; ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ ಜಾಮೀನು ಮಂಜೂರಾಗಿದೆ.

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ನಂಬಿಕೆ ದ್ರೋಹ, ಕೊಲೆ ಬೆದರಿಕೆ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಅರುಣ್ ಕುಮಾರ್ ಪುತ್ತಿಲ ತನ್ನ ವಕೀಲರಾದ ನರಸಿಂಹ ಪ್ರಸಾದ್ ಮೂಲಕ ಪುತ್ತೂರು ನ್ಯಾಯಾಲಯಕ್ಕೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ಪುತ್ತೂರಿನ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್.ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅರುಣ್ ಕುಮಾರ್ ಪುತ್ತಿಲ ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇದ್ದು ಮುಂದಿನ ದಿನಗಳಲ್ಲಿ ನನ್ನ ವಿರುದ್ಧ ಬಂದಂತಹ ಆರೋಪಗಳಿಗೆ ಕಾನೂನು ರೀತಿಯ ಹೋರಾಟ ಮಾಡುತ್ತೇನೆ ಎಂದಿದ್ದಾರೆ.