ಬೆಂಗಳೂರು: ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿನ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸ್‌ಗೆ ಸಂಬಂಧಿಸಿದಂತೆ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ವಜಾಗೊಂಡಿತ್ತು. ಈ ಹಿನ್ನೆಲೆ ಬಂಧನದ ಭೀತಿಯಿಂದ ಭವಾನಿ ರೇವಣ್ಣ ತಲೆಮರೆಸಿಕೊಂಡಿದ್ದಾರೆ.

ಇನ್ನು ಪ್ರಕರಣ ಸಂಬಂಧ ಎಸ್ಐಟಿ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣಗೆ ನೋಟಿಸ್ ನೀಡಿದೆ. ಆದ್ರೆ ಕಳೆದ ಹದಿನೈದು ದಿನಗಳಿಂದ ಭವಾನಿ ರೇವಣ್ಣ ನಾಪತ್ತೆಯಾಗಿದ್ದು, ಎಲ್ಲಿದ್ದಾರೆ ಎಂಬುದೇ ಗೊತ್ತಿಲ್ಲ. ಇದೀಗ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಪರ ವಕೀಲರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಸೋಮವಾರ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದೆ.