ಚಿಕ್ಕಮಗಳೂರು;ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದ ಪರಿಣಾಮ ಚಾಲಕ ಕಾರು ಸಮೇತ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಅಂಬಳೆ ಕೆರೆಯಲ್ಲಿ ನಡೆದಿದೆ. ಅಂಬಳೆ ಗ್ರಾಮದ ರಮೇಶ್ (33) ಮೃತ ಕಾರು ಚಾಲಕ.

ಕಳೆದ ತಡರಾತ್ರಿ ಏರಿಯಾ ಮೇಲೆ ಕಾರು ನಿಯಂತ್ರಣ ಕಳೆದುಕೊಂಡು ಅನಾಹುತ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಸಂತೋಷ ಎಂಬವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರ ಭೇಟಿ ಕಾರನ್ನು ಮೇಲಕ್ಕೆತ್ತಿದ್ದಾರೆ.
